ತುಂಗಾ ಡ್ಯಾಮ್‌ನಿಂದ ಭಾರಿ ಪ್ರಮಾಣದ ನೀರು ಹೊರಕ್ಕೆ, ಏಷ್ಟಿದೆ ಹೊರ ಹರಿವು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಭಾರಿ ಏರಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿ ಆಗಿರುವುದರಿಂದ ಎಲ್ಲ 22 ಕ್ರಸ್ಟ್‌ ಗೇಟ್‌ಗಳ ಮೂಲಕ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ತುಂಗಾ ಜಲಾಶಯಕ್ಕೆ 46,385 ಕ್ಯೂಸೆಕ್‌ ಒಳ ಹರಿವು ಇದೆ. 46,385 ಕ್ಯೂಸೆಕ್‌ ನೀರು ಹೊರ ಹರಿವು ಇದೆ. ಈ ಪೈಕಿ 43,305 ಕ್ಯೂಸೆಕ್‌ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಇದರಿಂದಾಗಿ ಶಿವಮೊಗ್ಗದಲ್ಲಿ ತುಂಗಾ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಹಳೆ ಸೇತುವೆ ಪಕ್ಕದಲ್ಲಿ ನಿರ್ಮಿಸಿರುವ ಚೆಕ್‌ ಡ್ಯಾಂ ಸಂಪೂರ್ಣ ಜಲಾವೃತವಾಗಿದೆ. ಕೋರ್ಪಲಯ್ಯ ಛತ್ರ ಮಂಟಪ ಸ್ವಲ್ಪ ಭಾಗ ಮಾತ್ರ ಮೇಲೆ ಕಾಣಿಸುತ್ತಿದೆ.

unga-Dam-All-crust-gates-opened

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಮುಂದುವರೆದಿದೆ. ಹಾಗಾಗಿ ಜಲಾಶಯದ ಒಳ ಹರಿವು ಪ್ರಮಾಣ ಮತ್ತಷ್ಟು ಹೆಚ್ಚಳವಾಗುವ ನಿರೀಕ್ಷೆ ಇದೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!