ನಡು ರಸ್ತೆಯಲ್ಲೆ ನಿಂತ ಬಸ್ಸು, ಅದೇ ಮಾರ್ಗದಲ್ಲಿ ಬಂತು ಸಂಸದರ ಕಾರು, ಮುಂದೇನಾಯ್ತು? ಫೋಟೊ ವೈರಲ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 FEBRUARY 2024

SHIMOGA : ಕೆಟ್ಟು ನಿಂತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದಾಗಿ ತೊಂದರೆಗೊಳಗಾಗಿದ್ದ ಪ್ರಯಾಣಿಕರಿಗೆ ಸಂಸದ ಬಿ.ವೈ.ರಾಘವೇಂದ್ರ ನೆರವು ನೀಡಿದ್ದಾರೆ. ಇದರ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಬೆಂಗಳೂರಿನಿಂದ ಕುಮಟಾಗೆ ತೆರಳುತ್ತಿದ್ದ ಶಿರಸಿ ಉಪ ವಿಭಾಗಕ್ಕೆ ಸೇರಿದ ಸರ್ಕಾರಿ ಬಸ್, ಶಿವಮೊಗ್ಗದ ತ್ಯಾವರೆಕೊಪ್ಪ ಸಮೀಪ ಕೆಟ್ಟು  ರಸ್ತೆ ಬದಿಯಲ್ಲಿ ನಿಂತಿತ್ತು. ಇದರಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು.

ಇದೇ ವೇಳೆ ಶಿವಮೊಗ್ಗದಿಂದ ಸಾಗರಕ್ಕೆ  ಕಾರಿನಲ್ಲಿ ತೆರಳುತ್ತಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು, ಸರ್ಕಾರಿ ಬಸ್ ನಿಂತಿದ್ದನ್ನು ಗಮನಿಸಿ ಕಾರಿನಿಂದ ಇಳಿದು ಬಸ್ ಚಾಲಕ, ನಿರ್ವಾಹಕರ ಬಳಿ ಕಾರಣ ಕೇಳಿದರು.

ಇದನ್ನೂ ಓದಿ – ಹೊಳೆ ಬಸ್‌ ನಿಲ್ದಾಣದ ಬಳಿ ರೈತನ ಮೇಲೆ ಬ್ಲೇಡ್‌ನಿಂದ ದಾಳಿ

ಬಸ್ ಕೆಟ್ಟಿರುವ ಮಾಹಿತಿ ತಿಳಿ ದ ಸಂಸದರು, ಕೆ.ಎಸ್.ಆರ್.ಟಿ.ಸಿ ಶಿವಮೊಗ್ಗ ವಿಭಾಗದ ವಿಭಾಗೀಯ ನಿಯಂತ್ರಣ ಅಧಿಕಾರಿ ವಿಜಯ್ ಕುಮಾರ್ ಅವರನ್ನು ಸಂಪರ್ಕಿಸಿ, ಕೂಡಲೆ  ಬಸ್ ದುರಸ್ತಿಗೆ ಕ್ರಮಕೈಗೊಂಡು ಪ್ರಯಾಣಿಕರಿಗೆ ನೆರವಾಗುವಂತೆ ಸೂಚಿಸಿದರು. ಅದರಂತೆ ಕೆ.ಎಸ್.ಆರ್.ಟಿ.ಸಿ ಡಿಸಿ ವಿಜಯ್ ಕುಮಾರ್ ಸಿಬ್ಬಂದಿಗಳನ್ನು ಸ್ಥಳಕ್ಕೆ ಕಳುಹಿಸಿ ಬಸ್ ದುರಸ್ತಿಗೊಳಿಸುವಲ್ಲಿ ಸಹಕರಿಸಿದರು. ತದನಂತರ ಬಸ್ ಕುಮಟಾದತ್ತ ಪ್ರಯಾಣ ಬೆಳೆಸಿತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment