ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020
ಮಳೆಯ ನಡುವೆಯು ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಿರುಸಾಗಿ ನಡೆಯುತ್ತಿದೆ. ಸಂಸದ ಬಿ.ವೈ.ರಾಘವೇಂದ್ರ ಇವತ್ತು ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದರು.
ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಏರ್ಬಸ್ ವಿಮಾನಗಳು ಲ್ಯಾಂಡಿಂಗ್ ಆಗಲು ಅನುವಾಗುವಂತೆ, ರನ್ವೇ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸಂಸದ ರಾಘವೇಂದ್ರ ಸೂಚಿಸಿದರು.
ವಿಮಾನ ನಿಲ್ದಾಣದ ಪ್ಲಾನ್ ಹಿಡಿದು ರನ್ ವೇಗೆ ಜಾಗಕ್ಕೆ ತೆರಳಿ ಪರಿಶೀಲನೆ ನಡೆಸಿದ ಸಂಸದ ರಾಘವೇಂದ್ರ, ಅಧಿಕಾರಿಗಳಿಂದ ಮಾಹಿತಿ ಪಡೆದು, ಅಗತ್ಯ ಸೂಚನೆ ನೀಡಿದರು.
ಪಿಡ್ಲುಡಿ ಮುಖ್ಯ ಎಂಜಿನಿಯರ್ ಕಾಂತರಾಜು, ಕಾರ್ಯಪಾಲಕ ಎಂಜಿನಿಯರ್ ಸಂಪತ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ, ಗುತ್ತಿಗೆದಾರರು ಸೇರಿ ಹಲವರು ಇದ್ದರು.
VIDEO REPORT
https://www.facebook.com/liveshivamogga/videos/669663100294768/?t=2
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422