ರಾತ್ರೋರಾತ್ರಿ ಹಾಡೋನಹಳ್ಳಿಯಲ್ಲಿ ಅಧಿಕಾರಿಗಳ ದಾಳಿ, ಅಬ್ಬಲಗೆರೆ ಬಳಿ ಟಿಪ್ಪರ್‌ ಸೀಜ್‌, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIVAMOGGA LIVE NEWS, 5 FEBRUARY 2025
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ : ಅಕ್ರಮವಾಗಿ ಮರಳು (Sand) ಸಾಗಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಳೆದ ರಾತ್ರಿ ದಿಢೀರ್‌ ದಾಳಿ ನಡೆಸಿದ್ದಾರೆ. ಈ ಸಂದರ್ಭ ಅಧಿಕಾರಿಗಳನ್ನು ಕಂಡು ಮರಳು ಸಾಗಿಸುತ್ತಿದ್ದ ಟ್ರಾಕ್ಟರ್‌ ನಿಲ್ಲಿಸದೆ ಪರಾರಿಯಾಗಿದ್ದಾನೆ. ಆದರೆ ಜೆಸಿಬಿಯೊಂದು ಸಿಕ್ಕಿಬಿದ್ದಿದೆ.

ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ನದಿಯಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಿಸುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದ್ದರು. ದಾಳಿಯ ಮಾಹಿತಿ ದೊರೆತ ಹಿನ್ನೆಲೆ ಟ್ರಾಕ್ಟರ್‌ ಚಾಲಕ ವೇಗವಾಗಿ ಟ್ರಾಕ್ಟರ್‌ ನುಗ್ಗಿಸಿ ಪರಾರಿಯಾಗಿದ್ದಾನೆ. ಇದರ ಹಿಂದೆಯೇ ಬಂದ ಜೆಸಿಬಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

mines-and-geology-department-officers-raid-at-hadonahalli sand

ಮರಳು ತುಂಬಿದ್ದ ಟಿಪ್ಪರ್‌ ವಶಕ್ಕೆ

ಇನ್ನು, ಮರಳು ತುಂಬಿಕೊಂಡು ರಸ್ತೆ ಬದಿ ನಿಂತಿದ್ದ ಟಿಪ್ಪರ್‌ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಪರಿಶೀಲಿಸಿದರು. ಮರಳು ಸಾಗಾಣೆಗೆ ಅಗತ್ಯ ದಾಖಲೆ ಇಲ್ಲದ ಹಿನ್ನೆಲೆ ಟಿಪ್ಪರ್‌ ಲಾರಿ ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ 2 ದಿನ ಸಾಹಿತ್ಯ ಸಮ್ಮೇಳನ, ಉದ್ಘಾಟನೆಗೆ ನಾಗತಿಹಳ್ಳಿ ಚಂದ್ರಶೇಖರ್‌, ಏನೆಲ್ಲ ಕಾರ್ಯಕ್ರಮ ಇರುತ್ತೆ?

Leave a Comment