ಪ್ರಧಾನಿ ಮೋದಿ ಭೇಟಿ ಮೊದಲು ಹೊಳಲೂರಿನಲ್ಲಿ ಕೇಂದ್ರದ ಅಧಿಕಾರಿಗಳ ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 ಮಾರ್ಚ್ 2022

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ಇವತ್ತು ಶಿವಮೊಗ್ಗದ ಹೊಳಲೂರು ಗ್ರಾಮದಲ್ಲಿ ಪರಿಶೀಲನೆ ನಡೆಸಿದರು.

Shimoga Nanjappa Hospital

ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಇಲಾಖೆ ಅಪರ ಕಾರ್ಯದರ್ಶಿ ಡಾ. ಚಂದ್ರಶೇಖರ್ ಕುಮಾರ್, ರಾಜ್ಯ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಶಿಲ್ಪಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಹೊಳಲೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಏನೆಲ್ಲ ಪರಿಶೀಲಿಸಿದರು?

ಹೊಳಲೂರು ಗ್ರಾಮದ ಸ್ವಚ್ಚ ಸಂಕೀರ್ಣ ಘಟಕ, ಸರ್ಕಾರಿ ಶಾಲೆ, ಅಂಗನವಾಡಿ, ಗ್ರಾಮ ಪಂಚಾಯಿತಿ ಕಚೇರಿ, ಸ್ವ ಸಹಾಯ ಸಂಘಗಳ ವಾಣಿಜ್ಯ ಮಳಿಗೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಏಪ್ರಿಲ್ 24ರಂದು ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದ ಹೊಳಲೂರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ.

ಈ ಸಂದರ್ಭ ರಾಜ್ಯ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

official visit to holalluru

officials visit holaluru

Official visit holaluru school

Nanjappa Hospital Shimoga

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment