SHIVAMOGGA LIVE NEWS | 8 ಮಾರ್ಚ್ 2022
ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ ಇವತ್ತು ಶಿವಮೊಗ್ಗದ ಹೊಳಲೂರು ಗ್ರಾಮದಲ್ಲಿ ಪರಿಶೀಲನೆ ನಡೆಸಿದರು.
ಕೇಂದ್ರ ಸರ್ಕಾರದ ಪಂಚಾಯತ್ ರಾಜ್ ಇಲಾಖೆ ಅಪರ ಕಾರ್ಯದರ್ಶಿ ಡಾ. ಚಂದ್ರಶೇಖರ್ ಕುಮಾರ್, ರಾಜ್ಯ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಶಿಲ್ಪಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಹೊಳಲೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಏನೆಲ್ಲ ಪರಿಶೀಲಿಸಿದರು?
ಹೊಳಲೂರು ಗ್ರಾಮದ ಸ್ವಚ್ಚ ಸಂಕೀರ್ಣ ಘಟಕ, ಸರ್ಕಾರಿ ಶಾಲೆ, ಅಂಗನವಾಡಿ, ಗ್ರಾಮ ಪಂಚಾಯಿತಿ ಕಚೇರಿ, ಸ್ವ ಸಹಾಯ ಸಂಘಗಳ ವಾಣಿಜ್ಯ ಮಳಿಗೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಏಪ್ರಿಲ್ 24ರಂದು ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದ ಹೊಳಲೂರು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ.
ಈ ಸಂದರ್ಭ ರಾಜ್ಯ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200