ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಮೇ 2020
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಪಾಸಿಟಿವ್ ಪ್ರಕರಣಗಳು ಹೆಚ್ಚಳದ ಜೊತೆಗೆ ಕಂಟೈನ್ಮೆಂಟ್ ಜೋನ್‌ಗಳ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಮೂರು ಮಂದಿಗೆ ಪಾಸಿಟಿವ್ ಬಂದ ಹಿನ್ನೆಲೆ, ಹೊಸದಾಗಿ ಮತ್ತೊಂದು ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ.
ಪಂಜಾಬ್‌ನಿಂದ ಬಂದವರಿಗೆ ಸೋಂಕು
ಪಂಜಾಬ್ ರಾಜ್ಯದಿಂದ ಶಿವಮೊಗ್ಗಕ್ಕೆ ಬಂದಿದ್ದ ಮೂವರಿಗೆ ಕರೋನ ಪಾಸಿಟಿವ್ ಬಂದಿದೆ. ಹಾಗಾಗಿ ಹೊಸ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ. ಪೇಷೆಂಟ್ ನಂಬರ್ 2853 – 7 ವರ್ಷದ ಹುಡುಗ, ಪಿ2854 – 3 ವರ್ಷದ ಹೆಣ್ಣು ಮಗು, ಪಿ2855 – 27 ವರ್ಷದ ಮಹಿಳೆಯಲ್ಲಿ ಕರೋನ ಸೋಂಕು ಪತ್ತೆಯಾಗಿದೆ.
ಯಾವತ್ತು ಬಂದಿದ್ದರು?
ಈ ಮೂವರು ಪಂಜಾಬ್ ರಾಜ್ಯದಿಂದ ರೈಲಿನ ಮೂಲಕ ಬೆಂಗಳೂರಿಗೆ ಬಂದಿದ್ದರು. ಅಲ್ಲಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮೇ ೨೨ರಂದು ಶಿವಮೊಗ್ಗಕ್ಕೆ ಬಂದಿದ್ದ ಇವರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಆದರೆ ಸರ್ಕಾರದ ಹೊಸ ಮಾರ್ಗ ಸೂಚಿಯಂತೆ ಏಳು ದಿನ ಕ್ವಾರಂಟೈನ್ ಮುಗಿಸಿ ಮನೆಗೆ ಮರಳಿದ್ದರು. ಈ ವೇಳೆ ಕರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಹಾಗಾಗಿ ಇವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ಎಂಟು ಮಂದಿ ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದರು ಎಂದು ಗುರುತಿಸಲಾಗಿದೆ.
ಯಾವುದು ಹೊಸ ಕಂಟೈನ್ಮೆಂಟ್ ಜೋನ್?
ಮೂವರು ಶಿವಮೊಗ್ಗ ತಾಲೂಕಿನ ಹಸೂಡಿಯ ಹಕ್ಕಿಪಿಕ್ಕಿ ಕ್ಯಾಂಪ್‌ನಲ್ಲಿರುವ ಮನೆಗೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಹಕ್ಕಿಪಿಕ್ಕಿ ಕ್ಯಾಂಪನ್ನು ಕಂಟೈನ್ಮೆಂಟ್ ಜೋನ್ ಎಂದು ಗುರುತಿಸಲಾಗಿದೆ. ಬ್ಯಾರಿಕೇಡ್‌ಗಳನ್ನು ಹಾಕಿ ಬಂದ್ ಮಾಡಲಾಗಿದೆ. ಮನೆಯಿಂದ ಯಾರೂ ಹೊರ ಬರುವಂತಿಲ್ಲ ಎಂದು ಸೂಚಿಸಲಾಗಿದೆ. ಆರೋಗ್ಯ ತಪಾಸಣೆಯನ್ನು ಆರಂಭಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು ಆರು ಕಂಟೈನ್ಮೆಂಟ್ ಜೋನ್
ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಕಂಟೈನ್ಮೆಂಟ್ ಜೋನ್‌ಗಳ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ತೀರ್ಥಹಳ್ಳಿಯ ಹಳ್ಳಿಬೈಲು, ಶಿವಮೊಗ್ಗದ ತುಂಗಾನಗರ, ತಾಲೂಕಿನ ಬಾಳೆಕೊಪ್ಪ, ಶಿಕಾರಿಪುರದ ತರಲಘಟ್ಟ, ಸೊರಬದ ಹಳೆ ಸೊರಬವನ್ನು ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ. ಈಗ ಹಕ್ಕಿಪಿಕ್ಕಿ ಕ್ಯಾಂಪ್ ಹೊಸ ಸೇರ್ಪಡೆಯಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422