ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 FEBRURARY 2023
SHIMOGA : ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು (Shivamogga Airport) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲೋಕಾರ್ಪಣೆ ಮಾಡಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಉದ್ಘಾಟನೆ ನೆರವೇರಿಸಿದರು.
ಟರ್ಮಿನಲ್ ನಲ್ಲಿ ಪ್ರಧಾನಿ ಸಂಚಾರ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಸೋಮಣ್ಣ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಟರ್ಮಿನಲ್ ಪರಿಶೀಲನೆ ನಡೆಸಿದರು. ಟರ್ಮಿನಲ್ ಒಳಾಂಗಣದಲ್ಲಿ ಇಟ್ಟಿದ್ದ ವಿಮಾನ ನಿಲ್ದಾಣದ ಮಾಡಲ್ ವೀಕ್ಷಿಸಿದರು.
ವಿವಿಧ ಸ್ವಸಹಾಯ ಸಂಘಗಳು, ವಿವಿಧ ಸಂಸ್ಥೆಗಳ ಕರಕುಶಲ ವಸ್ತುಗಳನ್ನು ವಿಮಾನ ನಿಲ್ದಾಣದಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಇವುಗಳನ್ನು ಕೂಡ ಪ್ರಧಾನಿ ನರೇಂದ್ರ ಮೋದಿ ಅವರು ವೀಕ್ಷಿಸಿದರು. ಸ್ವ ಸಹಾಯ ಸಂಘಗಳ ಪ್ರತಿನಿಧಿಗಳ ಜೊತೆಗೆ ಮಾತನಾಡಿದರು.
ಇದನ್ನೂ ಓದಿ – ಪ್ರಧಾನಿ ಮೋದಿ ಬಂದರೂ ಕಾರ್ಯಕ್ರಮ ಸ್ಥಳಕ್ಕೆ ತಲುಪಲಾಗದೆ ಪರದಾಡಿದ ಜನ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422