SHIVAMOGGA LIVE NEWS | 25 MARCH 2023
SHIMOGA : ಒಂದು ತಿಂಗಳ ಅಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೆ ಭಾರಿ ಭೇಟಿ ನೀಡಿದ್ದರು. ದಾವಣಗೆರೆಯಿಂದ ಆಗಮಿಸಿದ್ದ ಪ್ರಧಾನಿ, ವಾಯು ಸೇನೆಯ ವಿಶೇಷ ವಿಮಾನದಲ್ಲಿ (Special Flight) ನವದೆಹಲಿಗೆ ಪ್ರಯಾಣ ಬೆಳೆಸಿದರು.
ಮೂರು ಹೆಲಿಕಾಪ್ಟರ್ ನಲ್ಲಿ ಆಗಮನ
ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರಧಾನಿ ಕಚೇರಿಯ ಸಿಬ್ಬಂದಿ ಮೂರು ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಡಿ.ಎಸ್.ಅರುಣ್ ಸೇರಿದಂತೆ ಹಲವು ಪ್ರಮುಖರು ಮೋದಿ ಅವರನ್ನು ಸ್ವಾಗತಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಟೂ ಡೆಲ್ಲಿಗೆ ವಿಮಾನ
ಕೆಲವೆ ಕ್ಷಣದಲ್ಲಿ ವಾಯು ಸೇನೆಯ ವಿಶೇಷ ವಿಮಾನ (Special Flight) ಹತ್ತಿದ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯತ್ತ ಪ್ರಯಾಣ ಬೆಳೆಸಿದರು. ಸಂಜೆ 5.40ರ ಹೊತ್ತಿಗೆ ಪ್ರಧಾನಿ ಇದ್ದ ವಿಶೇಷ ವಿಮಾನ ಶಿವಮೊಗ್ಗದ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಯಿತು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಗಿ ಭದ್ರತೆ, ಹೆಚ್ಚುವರಿ ಪೊಲೀಸರ ನಿಯೋಜನೆ
ಫೆ.27ರಂದು ವಿಶೇಷ ವಿಮಾನದಲ್ಲಿಯೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಒಂದು ತಿಂಗಳು ಕಳೆಯುವ ಮೊದಲು ಮತ್ತೊಮ್ಮೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದು ವಿಶೇಷ.