BREAKING NEWS – ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 MARCH 2024

SHIMOGA : ಬಂಧನಕ್ಕೆ ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿಲಾಗಿದೆ. ಫಾರು ಎಂಬಾತನ ಕಾಲಿಗೆ ಇಂದು ಬೆಳಗ್ಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಫಾರು ಎಂಬಾತ ಮಲ್ಲಿಗೇನಹಳ್ಳಿ ಬಳಿ ಇರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಆತನ ಬಂಧನಕ್ಕೆ ತೆರಳಿದ್ದ ವೇಳೆ ತುಂಗಾ ನಗರ ಠಾಣೆ ಸಿಬ್ಬಂದಿ ನಾಗಪ್ಪ ಅವರ ಮೇಲೆ ಆರೋಪಿ ಫಾರು ಚಾಕುವಿನಿಂದ ದಾಳಿ ನಡೆಸಿದ್ದ. ಆತ್ಮರಕ್ಷಣೆಗಾಗಿ ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟರ್‌ ಸತ್ಯನಾರಾಯಣ ಅವರು ಆರೋಪಿ ಫಾರು ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಅವರು ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿದ್ದಾರೆ.

ಗಾಯಗೊಂಡಿರುವ ಪೊಲೀಸ್‌ ಸಿಬ್ಬಂದಿ ನಾಗಪ್ಪ ಮತ್ತು ಆರೋಪಿ ಫಾರುನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ಧಗಧಗ ಹೊತ್ತಿ ಉರಿದವು ವಸ್ತುಗಳು, ಬೆಂಕಿ ನಂದಿಸಿ ಮನೆ ಒಳಗೆ ಪರಿಶೀಲಿಸಿದಾಗ ಮಾಲೀಕನಿಗೆ ಕಾದಿತ್ತು ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment