ಆಯನೂರು, ಕುಂಸಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸೆ.27ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಆಯನೂರು ಗ್ರಾಮದ ವಿದ್ಯುತ್ (Power Cut) ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ನಿರ್ವಹಣೆ ಹಿನ್ನೆಲೆ ಸೆ.27 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ಆಯನೂರು, ಮಂಡಘಟ್ಟ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕುಂಸಿ ವ್ಯಾಪ್ತಿಯಲ್ಲಿ ಕರೆಂಟ್‌ ಇರಲ್ಲ

ಕುಂಸಿ ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಹಿನ್ನೆಲೆ ಸೆ.27 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಕೋಟಿ ಕೋಟಿ ಲಾಭ, ಹೊಸ ಯೋಜನೆಗಳ ಕುರಿತು ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ

ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೂಸೂರು, ಹೊರಬೈಲು, ಶೆಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

JNNCE-Admission-Advt-scaled

Power Cut in Shimoga

power cut mescom ELECTRICITY

Leave a Comment