ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | HOSANAGARA | 23 ಏಪ್ರಿಲ್ 2022

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ 31 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹೊಸನಗರ ತಾಲೂಕು ಕರಕೆ ಹಕ್ಲು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬಸ್ಸು ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ 5 ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಹೊಸನಗರ ಮತ್ತು ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಎಲ್ಲರು ಮನೆಗೆ ಮರಳಿದ್ದಾರೆ ಎಂದು ತಿಳಿದು ಬಂದಿದೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ | ನಡು ರಸ್ತೆಯಲ್ಲೇ ಕೆಟ್ಟು ನಿಂತ ಬಸ್, ನೆಹರು ರೋಡಲ್ಲಿ ವಾಹನ ಸವಾರರಿಗೆ ಪೀಕಲಾಟ

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment