ಶಿವಮೊಗ್ಗ ಲೈವ್
SHIVAMOGGA LIVE NEWS | HOSANAGARA | 23 ಏಪ್ರಿಲ್ 2022 (ಈ ಸುದ್ದಿಯನ್ನು ಇನ್ನು 32 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ 31 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹೊಸನಗರ ತಾಲೂಕು ಕರಕೆ ಹಕ್ಲು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬಸ್ಸು ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ 5 ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಹೊಸನಗರ ಮತ್ತು ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಎಲ್ಲರು ಮನೆಗೆ ಮರಳಿದ್ದಾರೆ ಎಂದು ತಿಳಿದು ಬಂದಿದೆ. ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ | ನಡು ರಸ್ತೆಯಲ್ಲೇ ಕೆಟ್ಟು ನಿಂತ ಬಸ್, ನೆಹರು ರೋಡಲ್ಲಿ ವಾಹನ ಸವಾರರಿಗೆ ಪೀಕಲಾಟ
