ಶಿವಮೊಗ್ಗ: ಆನೆ ಕಂದಕಕ್ಕೆ ಬಿದ್ದು ಯುವಕ ಸಾವನ್ನಪ್ಪಿದ ಪ್ರಕರಣದ ಬೆನ್ನಿಗೆ ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ಆಕ್ರೋಶ (Protest) ವ್ಯಕ್ತಪಡಿಸಿದ್ದಾರೆ. ಇಂದು ಗ್ರಾಮ ಪಂಚಾಯಿತಿ ಮುಂಭಾಗ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ತಾಲೂಕು ಆಡಿನಕೊಟ್ಟಿಗೆ ಗ್ರಾಮದಲ್ಲಿ ಕಳೆದ ಎರಡು ದಿನದ ಹಿಂದೆ ಆನೆ ಕಂದಕಕ್ಕೆ ಬಿದ್ದು ಗ್ರಾಮದ ನಾಗರಾಜ್ ಎಂಬುವವರು ಮೃತಪಟ್ಟಿದ್ದರು. ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿ ಗ್ರಾಮಸ್ಥರು ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಆನೆ ನಿಯಂತ್ರಣ ಕಂದಕದಿಂದ ನೀರು ಹರಿದು ಹೋಗದೆ ಅಲ್ಲಿಯೆ ಸಂಗ್ರಹವಾಗುತ್ತಿದೆ. ಕಳೆದ ಎರಡ್ಮೂರು ವರ್ಷದಿಂದ ಪೈಪ್ ಅಳವಡಿಸಲು ಮನವಿ ಮಾಡಲಾಗುತ್ತಿದೆ. ಆದರೆ ಗ್ರಾಮ ಪಂಚಾಯಿತಿಯವರು ಆನೆ ಕಂದಕದ ಬಳಿ ಪೈಪ್ ಹಾಕದೇ ನಿರ್ಲಕ್ಷ್ಯ ವಹಿಸಿದ್ದಾರೆ. ಇದರ ಪರಿಣಾಮ ನಾಗರಾಜ್ ಅವರು ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.



ಇದನ್ನೂ ಓದಿ » ಅಡಿಕೆ ಬೆಳೆಗಾರರ ಗಮನಕ್ಕೆ, ಭದ್ರಾವತಿ ಆಕಾಶವಾಣಿಯಿಂದ ಫೋನ್ ಇನ್, ಯಾವಾಗ?
Protest against tammadihalli grama panchayat
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





