ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA TALUK NEWS | 1 MARCH 2021
ಉಂಬ್ಳೆಬೈಲು, ಕೊರ್ಲಹಳ್ಳಿ, ಮತ್ತೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕಾಡಾನೆ ಸೇರಿದಂತೆ ಕಾಡು ಪ್ರಾಣಿಗಳ ಉಪಟಳ ತಡೆಯುವಲ್ಲಿ ವಿಫಲವಾದ ಅರಣ್ಯ ಇಲಾಖೆ ವಿರುದ್ಧ ಪ್ರಜಾಸ್ಪಂದನ ಸಾಮಾಜಿಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ | ಉಂಬ್ಳೆಬೈಲು ಅರಣ್ಯ ವ್ಯಾಪ್ತಿಯಲ್ಲಿ ಮತ್ತೆ ಕಾಣಿಸಿದ ಕಾಡಾನೆ, ಲಕ್ಕಿನಕೊಪ್ಪದಲ್ಲಿ ತೋಟಕ್ಕೆ ದಾಳಿ
ಉಂಬ್ಳೆಬೈಲು ವಲಯ ಅರಣ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಕಾಡಾನೆ ಸೇರಿದಂತೆ ಕಾಡು ಪ್ರಮಾಣಿಕಗಳ ಉಪಟಳದಿಂದಾಗಿ ಸಮಸ್ಯೆ ಹೆಚ್ಚಾಗಿದೆ. ಇದನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.
ಹೋರಾಟಗಾರರ ಬೇಡಿಕೆಗಳೇನು
ಕಾಡಾನೆ ಸೇರಿದಂತೆ ಎಲ್ಲಾ ಬಗೆಯ ಕಾಡು ಪ್ರಾಣಿಗಳಿಂದ ಬೆಳೆಗಳಿಗೆ ರಕ್ಷಣೆ ಒದಗಿಸಬೇಕು. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕಂದಕ, ತಡೆಬೇಲಿ ನಿರ್ಮಿಸಬೇಕು. ಕಾಡು ಪ್ರಾಣಿಗಳಿಂದ ಹಾನಿಗೊಳದ ತೋಟದಲ್ಲಿ ಪ್ರತಿ ಅಡಕೆ, ತೆಂಗು ಬೆಳೆಗೆ ಪ್ರತಿ ಸಸಿಗೆ 10 ಸಾವಿರ, ಬಾಳೆ ಅಥವಾ ಇತರೆ ಬೆಳೆಗೆ ಪ್ರತಿ ಎಕರೆಗೆ ಕನಿಷ್ಠ 50 ಸಾವಿರ ರೂ. ಪರಿಹಾರ ನೀಡಬೇಕು. ಕಾಡು ಪ್ರಾಣಿಗಳಿಂದ ಜಾನುವಾರುಗಳ ಮೇಲೆ ದಾಳಿ ತಡೆದು ರೈತರಿಗೆ ಅನುಕೂಲ ಮಾಡಿಕೊಡಬೇಕು. ಭದ್ರಾ ಡ್ಯಾಂ ಸಂತ್ರಸ್ಥರಿಗೆ ನೀಡಿದ ಜಮೀನಿನ ಜಂಟಿ ಸರ್ವೆ ಮಾಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದನ್ನೂ ಓದಿ | ಅಪರೇಷನ್ ಮುಗಿದು ವಾರ ಕಳೆಯೋದರಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ತೋಟಗಳಿಗೆ ದಾಳಿ
ಸಂಘಟನೆ ಅಧ್ಯಕ್ಷ ದುಗ್ಗಪ್ಪಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಉಪಾಧ್ಯಕ್ಷ ಗಂಗಾಧರ್, ಕಾರ್ಯದರ್ಶಿ ಜೆ.ಗಂಗಾರಾಜ್, ಖಜಾಂಚಿ ವಾಸುದೇವ್ ಸೇರಿದಂತೆ ಹಲವರು ಪ್ರತಭಟನೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422