ಹೊಳೆಹೊನ್ನೂರು ಪೊಲೀಸ್ ಠಾಣೆ ಗೇಟ್ ಮುಂದೆ ಗ್ರಾಮಸ್ಥರ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | HOLEHONNURU | 21 ಜುಲೈ 2022

ಮುಜರಾಯಿ ದೇವಸ್ಥಾನದ ಹೆಸರಿನಲ್ಲಿ ಅನಧಿಕೃತವಾಗಿ ಟ್ರಸ್ಟ್ ನಿರ್ಮಿಸಿಕೊಂಡು ಗ್ರಾಮಸ್ಥರಿಗೆ ತೊಂದರೆ ಉಂಟು ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ದಾನವಾಡಿ ಗ್ರಾಮಸ್ಥರು ಹೊಳೆಹೊನ್ನೂರು ಠಾಣೆ ಎದುರು ಪ್ರತಿಭಟನೆ (PROTEST) ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Shimoga Nanjappa Hospital

ದಾನವಾಡಿ ಗುಡ್ಡದಲ್ಲಿರುವ ಗಿರಿ ರಂಗನಾಥ ದೇವಸ್ಥಾನ ಹೆಸರಿನಲ್ಲಿ ಅನಧಿಕೃತವಾಗಿ ಟ್ರಸ್ಟ್ ತೆರೆಯಲಾಗಿದೆ. ಅವರು ತಿರುಪತಿಗೆ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಸ್ಥಳೀಯರಿಂದ ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ್ದಾರೆ. ಅಮಾವಾಸ್ಯೆ, ಹುಣ್ಣಿಮೆಗಳಂದು ವಿಶೇಷ ಪೂಜೆ ಮಾಡುತ್ತಿರುವುದಾಗಿ ಮಹಿಳೆಯರನ್ನು ಗುಡ್ಡಕ್ಕೆ ಕರೆದುಕೊಂಡು ಹೋಗುತ್ತಾರೆ ಎಂದು ಆಪಾದಿಸಿದರು.

ಶನಿವಾರ ದಾಸೋಹ ನಡೆಸಲು ಮುಂದಾಗಿದ್ದನ್ನು ಗ್ರಾಮಸ್ಥರು ತಡೆದಿದ್ದಾರೆ. ಟೆಂಟ್ ನಿರ್ಮಿಸಿದವರೇ ಅದನ್ನು ತೆರವುಗೊಳಿಸಿದ್ದಾರೆ. ಆದರೆ ದೇವಸ್ಥಾನ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿದ್ದು ಅರ್ಚಕರು, ಮುಖಂಡರು ಕೋರ್ಟ್‌ಗೆ ಅಲೆಯುವಂತಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.

ಎರಡೂರು ದಿನಗಳ ಹಿಂದೆ ಮುಖಂಡರ ಸಮ್ಮುಖದಲ್ಲಿ ನಡೆದ ರಾಜೀ ಪಂಚಾಯಿತಿಯಲ್ಲಿ ನಮ್ಮದೇ ತಪ್ಪು ಎಂದು ಒಪ್ಪಿಕೊಂಡು ಹೋದವರು ಮತ್ತೆ ಠಾಣೆಗೆ ಬಂದು ಪ್ರಕರಣ ದಾಖಲಿಸಿದ್ದಾರೆ. ಗ್ರಾಮಸ್ಥರು ನೀಡಿದ ಬಿಟ್ಟು ಕಿಡಿಗೇಡಿಗಳು ನೀಡಿದ ದೂರು ಆಧರಿಸಿ ಪೊಲೀಸರು ಕ್ರಮಕ್ಕೆ ಮುಂದಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಗ್ರಾಮಸ್ಥರು ಕಿಡಿಗೇಡಿಗಳ ವಿರುದ್ಧ ಮತ್ತೊಮ್ಮೆ ದೂರು ದಾಖಲಿಸಿದರು.

ರಾಜ್ಯ ಮಾದಿಗ ಸಮಾಜದ ಅಧ್ಯಕ್ಷ ಮಂಜುನಾಥ್, ಮುಖಂಡರಾದ ನಾಗರಾಜಪ್ಪ, ಪ್ರಕಾಶ್‌, ಲೋಹಿತ್‌, ಗುರುಮೂರ್ತಿ, ಲೊಕೇಶ್, ಶಂಕ್ರಪ್ಪ, ಕೃಷ್ಣಪ್ಪ, ಗೋಪಾಲಪ್ಪ, ಹಾಲೇಶ್‌, ಮಂಜುನಾಥ್, ಗಿರೀಶ್ ಇತರರಿದ್ದರು.

ಇದನ್ನೂ ಓದಿ – ಮೂರು ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 546 ಕಡೆ ದಾಳಿ, 269 ಕೇಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 21, 2022

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

Leave a Comment