ಪೆಟ್ರೋಲ್‌ ದರ ಇಳಿಸುವ ತನಕ ಹೋರಾಟ, ಶಿವಮೊಗ್ಗದಲ್ಲಿ ಪ್ರತಿಭಟನೆ ಸ್ವರೂಪ ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 18 JUNE 2024

SHIMOGA : ರಾಜ್ಯ ಸರ್ಕಾರ ಪೆಟ್ರೋಲ್‌, ಡಿಸೇಲ್‌ ದರ ಇಳಿಸುವವರೆಗೂ ಹೋರಾಟ (Protest) ನಡೆಸುತ್ತೇವೆ. ರಾಜ್ಯಾದ್ಯಂತ ಗುರುವಾರ ರಸ್ತೆ ತಡೆ ನಡೆಸುತ್ತೇವೆ, ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಶಿವಮೊಗ್ಗದ ಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಪ್ರತಿ ವಸ್ತುವಿನ ದರ ಏರಿಕೆಯಾಗಿದೆ. ಈ ಹಿಂದೆ ಮದ್ಯದ ದರ ಹೆಚ್ಚಳ ಮಾಡಿದ್ದರು. ಪಟ್ರೋಲ್‌, ಡಿಸೇಲ್‌ ದರ ಏರಿಸಿದ್ದಾರೆ. ಒಂದೇ ವರ್ಷದಲ್ಲಿ ಈ ಸರ್ಕಾರ ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ತಂದೊಡ್ಡಿದೆ ಎಂದು ಆರೋಪಿಸಿದರು.

ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಆಡಳಿತ ಪಕ್ಷದ ನಾಯಕರೆ ಇದನ್ನು ಹೇಳುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ವಿಚಾರಕ್ಕು ಕೇಂದ್ರ ಸರ್ಕಾರವನ್ನು ದೂರುತ್ತ ಓಡಾಡುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರವಾಗಿದೆ. ಈ ಸರ್ಕಾರ ಒಂದು ಕಡೆ ಬೆಲೆ ಏರಿಕೆ, ಮತ್ತೊಂದು ಕಡೆ ಭ್ರಷ್ಟಾಚಾರ ಮಾಡುತ್ತಿದೆ. ಹಾಗಿದ್ದರೆ ಸರ್ಕಾರದ ಹಣ ಎಲ್ಲಿ ಹೋಗುತ್ತಿದೆ ಎಂದು ವಿಜಯೇಂದ್ರ ಪ್ರಶ್ನಿಸಿದರು.

ಇದನ್ನೂ ಓದಿ – ಸಿಗಂದೂರು ಲಾಂಚ್‌, ಸ್ಥಳ ಪರಿಶೀಲನೆ ಬಳಿಕ ಕಡವು ನಿರೀಕ್ಷಕರಿಂದ ಮಹತ್ವದ ಪತ್ರ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment