ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 6 AUGUST 2024 : ಮನೆಯೊಂದರ ಹಿಂಬದಿ ಹುಲ್ಲಿನ ಪಿಂಡಿಗಳ ಅಡಿ ಅವಿತಿದ್ದ ಹೆಬ್ಬಾವನ್ನು (python) ಉರಗ ರಕ್ಷಕ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿ ರಸ್ತೆಯ ಕುರುಬರ ಪಾಳ್ಯದಲ್ಲಿ ಹಾವು ಪತ್ತೆಯಾಗಿತ್ತು.
ಸುಹಾಸ್ ಎಂಬುವವರ ಮನೆ ಹಿಂಬದಿ ಹುಲ್ಲಿನ ಪಿಂಡಿಗಳನ್ನು ಇಟ್ಟಿದ್ದರು. ಬೆಳಗ್ಗೆ ಹಸುಗಳಿಗೆ ಹುಲ್ಲು ತರಲು ಹೋದಾಗ ಹಾವು ಕಾಣಿಸಿತ್ತು. ವಿಷಯ ತಿಳಿದು ಸ್ಥಳಕ್ಕೆ ತೆರಳಿದ್ದ ಸ್ನೇಕ್ ಕಿರಣ್ ಸುಮಾರು ಏಳೂವರೆ ಅಡಿ ಉದ್ದದ ಹೆಬ್ಬಾವು ರಕ್ಷಣೆ ಮಾಡಿದ್ದಾರೆ. ಈ ಹಾವು 7 ಕೆ.ಜೆ 700 ಗ್ರಾಮ್ ತೂಕವಿತ್ತು. ಶಂಕರ ವಲಯ ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಹೆಬ್ಬಾವನ್ನು ಸಮೀಪದ ಅರಣ್ಯಕ್ಕೆ ಬಿಡಲಾಗಿದೆ.

ಇದನ್ನೂ ಓದಿ ⇓
ತ್ಯಾವರೆಕೊಪ್ಪ ಮೃಗಾಲಯದ ಆರ್ಯ ಇನ್ನಿಲ್ಲ
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು















