ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ವಿಮಾನ ನಿಲ್ದಾಣದ ಶೇ.50ರಷ್ಟು ಕೆಲಸ ಮುಗಿದಿದೆ. ಇನ್ನು ಎಂಟರಿಂದ ಒಂಭತ್ತು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.
ಸೋಗಾನೆಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸಂಸದ ರಾಘವೇಂದ್ರ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರೀಕ್ಷೆಗೂ ಮೀರಿದ ವೇಗದಲ್ಲಿ ಕಾಮಗಾರಿ ನಡೆಯುತ್ತಿದೆ ಎಂದರು.
ರನ್ ವೇ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಏಳೆಂಟು ತಿಂಗಳಲ್ಲಿ ರನ್ ವೇ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
ಮಳೆಗಾಲದಲ್ಲೂ ನಿಲ್ಲಲ್ಲ ಕೆಲಸ
ಮಳೆಗಾಲದಿಂದ ಕೆಲಸ ವಿಳಂಬವಾಗುವ ಸದ್ಯತೆ ಇದೆ. ಆದರೆ ಮಳೆಯನ್ನು ಲೆಕ್ಕಿಸದೆ ಕಾಮಗಾರಿ ಮುಂದುವರೆಯಲಿದೆ. ದೊಡ್ಡ ಏರ್ ಬಸ್ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‍ಗೆ ಪೂರ್ಣ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮಧ್ಯ ಕರ್ನಾಟಕಕ್ಕೆ ಅನುಕೂಲ
ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ವಿಮಾನ ನಿಲ್ದಾಣದಿಂದಾಗಿ ಮಧ್ಯ ಕರ್ನಾಟಕ ಭಾಗಕ್ಕೆ ತುಂಬಾ ಅನುಕೂಲವಾಗಲಿದೆ. ಕೈಗಾರಿಕೆಗಳ ಬೆಳವಣಿಗೆಗೆ ಸಹಕಾರಿಯಾಲಿದೆ. ಕಾಮಗಾರಿಗೆ ಯಾವುದೆ ಹಣಕಾಸು ತೊಂದರೆ ಇಲ್ಲ ಎಂದರು.
ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷ ದತ್ತಾತ್ರಿ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮೇಯರ್ ಸುನೀತಾ ಅಣ್ಣಪ್ಪ, ಬಿಜೆಪಿ ನಗರಾಧ್ಯಕ್ಷ ಜಗದೀಶ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






