ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 9 OCTOBER 2024 : ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ರೈಲ್ವೆ ಹಳಿ (Track) ಕೆಳಗಿದ್ದ ಜೆಲ್ಲಿ ಕೊಚ್ಚಿ ಹೋಗಿದೆ. ಟ್ರ್ಯಾಕ್ ಮೆನ್ಗಳ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಹಳಿ ರಿಪೇರಿ ಕಾರ್ಯದ ಹಿನ್ನೆಲೆ ತಾಳಗುಪ್ಪದಿಂದ ಬೆಂಗಳೂರು ಮತ್ತು ಮೈಸೂರಿಗೆ ಹೊರಟಿದ್ದ ರೈಲುಗಳು ತಡವಾಗಿ ಸಂಚರಿಸುತ್ತಿವೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೊಚ್ಚಿ ಹೋದ ಜೆಲ್ಲಿ
ಕುಂಸಿ – ಆನಂದಪುರ ರೈಲ್ವೆ ಮಾರ್ಗದಲ್ಲಿ ಸೂಡುರು ಬಳಿ ಜೆಲ್ಲಿ ಕೊಚ್ಚಿ ಹೋಗಿತ್ತು. ಇಳಿಜಾರು ಪ್ರದೇಶವಾಗಿದ್ದರಿಂದ ಮಳೆ ನೀರು ರಭಸವಾಗಿ ಹರಿದಾಗ ಜೆಲ್ಲಿ ಕೊಚ್ಚಿ ಹೋಗಿದೆ ಎನ್ನಲಾಗಿದೆ. ಟ್ರ್ಯಾಕ್ ಮೆನ್ಗಳು ಗಸ್ತು ವೇಳೆ ಜೆಲ್ಲಿ ಕೊಚ್ಚಿ ಹೋಗಿರುವುದು ಗೊತ್ತಾಗಿದೆ. ಕೂಡಲೆ ರೈಲು ನಿಲ್ದಾಣಗಳಿಗೆ ವಿಷಯ ತಿಳಿಸಿದ್ದರು. ರೈಲ್ವೆ ಇಂಜಿನಿಯರಿಂಗ್ ತಂಡ, ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ ಜೆಲ್ಲಿ ಭರ್ತಿ ಮಾಡಿ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಎರಡು ರೈಲು ಸಂಚಾರ ವಿಳಂಬ
ಟ್ರ್ಯಾಕ್ ರಿಪೇರಿ ಹಿನ್ನೆಲೆ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.
ಬೆಳಗ್ಗೆ 5.15ಕ್ಕೆ ತಾಳಗುಪ್ಪದಿಂದ ಹೊರಟಿದ್ದ ಇಂಟರ್ಸಿಟಿ ರೈಲು ಸಾಗರ – ಆನಂದಪುರ ನಿಲ್ದಾಣಗಳ ನಡುವೆ ನಿಲ್ಲಿಸಲಾಗಿತ್ತು. ಸದ್ಯ ಈ ರೈಲು ಸುಮಾರು 2 ಗಂಟೆ ತಡವಾಗಿ ಸಂಚರಿಸುತ್ತಿದೆ. ಬೆಳಗ್ಗೆ 6.15ಕ್ಕೆ ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್ಪ್ರೆಸ್ ರೈಲು ಕೂಡ ವಿಳಂಬವಾಗಿ ಸಂಚರಿಸುತ್ತಿದೆ.
ಇದನ್ನೂ ಓದಿ » ಆಯನೂರು | ಶಾರ್ಟ್ ಸರ್ಕ್ಯೂಟ್ಗೆ ಲಕ್ಷ ಲಕ್ಷದ ವಸ್ತುಗಳು ಆಹುತಿ