ಆಯನೂರು: ದೇವಸ್ಥಾನದ ಬಳಿ ಸಿಕ್ಕ ಪರ್ಸ್ (purse) ಅನ್ನು ಆಯನೂರು ನಿವಾಸಿಗಳು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?
ಆಯನೂರಿನ ದಾಮೋದರ, ನಾಗರಾಜ್ ಮತ್ತು ಸತೀಶ್ ಅವರಿಗೆ ಜನವರಿ 17ರಂದು ಆಯನೂರು ಸರ್ಕಲ್‌ನ ಗಣಪತಿ ದೇವಸ್ಥಾನದ ಮುಂಭಾಗ ಪರ್ಸ್ ಸಿಕ್ಕಿತ್ತು. ಅದರಲ್ಲಿ ₹10,000 ನಗದು ಮತ್ತು ಪ್ರಮುಖ ದಾಖಲೆಗಳಿದ್ದವು. ತಕ್ಷಣವೇ ಅದನ್ನು ಕುಂಸಿ ಪೊಲೀಸ್ ಠಾಣೆಗೆ ಕೊಂಡೊಯ್ದು ಒಪ್ಪಿಸಿದ್ದರು.

ಪರ್ಸ್‌ನಲ್ಲಿದ್ದ ದಾಖಲೆಗಳ ಆಧಾರದ ಮೇಲೆ ಪೊಲೀಸರು ಅದು ಚಿಕ್ಕಮತಲಿ ಗ್ರಾಮದ ಬಲರಾಮ್ ಎಂಬುವವರಿಗೆ ಸೇರಿದ್ದೆಂದು ಗುರುತಿಸಿದ್ದರು. ಅವರನ್ನು ಠಾಣೆಗೆ ಕರೆಸಿ ಪರ್ಸ್ ಹಸ್ತಾಂತರಿಸಿದ್ದಾರೆ. ಕಳೆದುಹೋದ ಹಣ ಮತ್ತು ದಾಖಲೆಯನ್ನು ಪ್ರಾಮಾಣಿಕವಾಗಿ ಮರಳಿಸಿದ ಈ ಆಯನೂರಿನ ದಾಮೋದರ, ನಾಗರಾಜ್ ಮತ್ತು ಸತೀಶ್ ಕಾರ್ಯಕ್ಕೆ ಪೊಲೀಸರು ಅಭಿನಂದನೆ ಸಲ್ಲಿಸಿದ್ದಾರೆ.

LATEST NEWS
- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





