ಹಾಲಲಕ್ಕವಳ್ಳಿಯಲ್ಲಿ ಅಪಘಾತ, ತೀವ್ರ ಗಾಯಗೊಂಡಿದ್ದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ತಾಲೂಕಿನ ಹಾಲಲಕ್ಕವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಹಾಲ ಲಕ್ಕವಳ್ಳಿಯ ಜಗದೀಶ್ (58) ಮೃತರು. ಹೈದರಾಬಾದ್‌ನಿಂದ ಶಿವಮೊಗ್ಗ ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ಸಂಬಂಧಿಕರನ್ನು ಕರೆತರಲು ಇವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಪ್ರಾಣಿಯೋ ಅಥವಾ ಅಪರಿಚಿತ ವಾಹನವೋ ಡಿಕ್ಕಿ ಹೊಡೆದ ಪರಿಣಾಮ ಜಗದೀಶ್ ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡಿದ್ದರು.

SHIMOGA-NEWS-GRAPHICS-BY-SHIVAMOGGA-LIVE

ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.