ತೀರ್ಥಹಳ್ಳಿ ತಾಲೂಕು ಕಚೇರಿವರೆಗೆ ಮಂಜುನಾಥಗೌಡ ನೇತೃತ್ವದಲ್ಲಿ ಪಾದಯಾತ್ರೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | GAJANURU | 24 ಜುಲೈ 2022

ಸ್ವಾತಂತ್ರ್ಯ ಅಮೃತ ಮಹೋತ್ಸವದ ನೆನಪಿಗಾಗಿ ತೀರ್ಥಹಳ್ಳಿಯಲ್ಲಿ (THIRTHAHALLI) ನಡೆಯುವ ಬೃಹತ್ ಪಾದಯಾತ್ರೆಗೆ (PADAYATHRE) ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾಗೃತಿ ಸಮಾವೇಶಕ್ಕೆ ಮೆರಗು ನೀಡಬೇಕು ಎಂದು ಕೆಪಿಸಿಸಿ ಸಹಕಾರಿ ವಿಭಾಗದ ಸಂಚಾಲಕ ಆರ್.ಎಂ. ಮಂಜುನಾಥಗೌಡ ಮನವಿ ಮಾಡಿದರು.

Shimoga Nanjappa Hospital

ಗಾಜನೂರಿನಲ್ಲಿ ನಡೆದ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಆರ್.ಎಂ.ಮಂಜುನಾಥಗೌಡ ಮಾತನಾಡಿದರು. ಸಮಾಜಕ್ಕಾಗಿ ಹೋರಾಡಿದವರ ನೆನಪು ಮಾಡಿಕೊಳ್ಳುವುದು ಅಗತ್ಯವಾಗಿದೆ. ಮುಖ್ಯವಾಗಿ ಯುವ ಪೀಳಿಗೆಗೆ ಇದನ್ನು ನೆನಪಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಜು. 28 ರಂದು ಬೆಳಗ್ಗೆ 8 ಗಂಟೆಗೆ ಹಾರೋಗುಳಿಗೆ ಗ್ರಾಮದ ಕಡಿದಾಳ್ ಮಂಜಪ್ಪನವರ ಸಮಾಧಿ ಸ್ಥಳದಿಂದ ತೀರ್ಥಹಳ್ಳಿ ತಾಲೂಕು ಕಚೇರಿವರೆಗೆ ಪಾದಯಾತ್ರೆ (PADAYATHRE) ಹಮ್ಮಿಕೊಂಡಿದ್ದೇವೆ ಎಂದರು.

ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷವಾಗಿದೆ. ನಮಗೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಈ ಅಮೃತ ವರ್ಷದ ಸವಿನೆನಪಿನಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ನೆನಪು ಮಾಡಿಕೊಳ್ಳುವುದು ಕರ್ತವ್ಯ ಆಗಿದೆ. ತೀರ್ಥಹಳ್ಳಿಯಲ್ಲಿ ಶಾಂತವೇರಿ ಗೋಪಾಲಗೌಡು, ಕಡಿದಾಳ್ ಮಂಜಪ್ಪನವರು, ಶೇಷಪ್ಪ ಹೆಗ್ಗಡೆ, ದೇವಂಗಿ ಮಾನಪ್ಪ ಮುಂತಾದವರು ಮೇರು ವ್ಯಕ್ತಿತ್ವವುಳ್ಳವರು. ಕಡಿದಾಳ್ ಮಂಜಪ್ಪನವರು ಮುಖ್ಯಮಂತ್ರಿಯಾಗಿದ್ದವರು. ಇಂತಹ ಸಮಾಜವಾದಿಗಳ ಸೇವೆಯಿಂದ ತೀರ್ಥಹಳ್ಳಿಯ ಘನತೆ ಹೆಚ್ಚಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ ಮಾತನಾಡಿ, ಸ್ವಾತಂತ್ರ್ಯದ ಬಳಿಕ ದೇಶವನ್ನು ಬಲಾಢ್ಯವಾಗಿ ಕಾಂಗ್ರೆಸ್ ಪಕ್ಷ ಕಟ್ಟಿದೆ. ಅಂಬೇಡ್ಕರ್ ಸಂವಿಧಾನ ರಚಿಸಿದರೆ, ವಲ್ಲಭ ಬಾಯ್ ಪಟೇಲ್ ದೇಶವನ್ನು ಒಂದುಗೂಡಿಸಿದ್ದರು. ಹತ್ತಾರು ಧರ್ಮಗಳು ಇಲ್ಲಿವೆ. ಇದು ಸಾಮರಸ್ಯಗಳ ಬೀಡಾಗಿದೆ. ಎಲ್ಲಾ ಹೋರಾಟಗಳ ನೆನಪು ಮಾಡಿಕೊಳ್ಳುವುದು ಪ್ರಸ್ತುತವಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಸಹಕಾರಿ ವಿಭಾಗದ ಅಧ್ಯಕ್ಷ ಜಗದೀಶ್ ಗೌಡ, ಪ್ರಮುಖರಾದ ರಾಘವೇಂದ್ರ, ನೂರ್ ಅಹಮ್ಮದ್, ಶಿವಕುಮಾರ್, ಮಲ್ಲಿಕಾರ್ಜುನ್, ಅಕ್ರಂ, ಸಲೀಂ ಖಾನ್ ಮುಂತಾದವರಿದ್ದರು.

ಇದನ್ನೂ ಓದಿ – ಅಡಕೆ ಧಾರಣೆ | 25 ಜುಲೈ 2022 | ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

https://chat.whatsapp.com/Doh0PyFFSiTBZY73X533cb

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment