ಶಿವಮೊಗ್ಗ ಲೈವ್
ಶಿವಮೊಗ್ಗ: ಅಬ್ಬಲಗೆರೆ ಬಳಿ ತುಂಗಾ ಎಡದಂಡೆ ನಾಲೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೊಬ್ಬ ನೀರುಪಾಲಾಗಿದ್ದಾನೆ. ಆತನಿಗಾಗಿ ಶೋಧ ಕಾರ್ಯ ನಡೆಸಲಾಯಿತು.
ಬೊಮ್ಮನಕಟ್ಟೆ ಬಂಗಾರಪ್ಪ ಆಶ್ರಯ ಬಡಾವಣೆಯ ವೆಂಕಟೇಶ್ವರ ಎಂಬುವವರ ಮಗ ಕೃಷ್ಣ (16) ನೀರುಪಾಲಾದ ಬಾಲಕ. ಕೃಷ್ಣ, ಖಾಸಗಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ. ಇಂದು ಶಾಲೆಗೆ ರಜೆಯಿದ್ದ ಹಿನ್ನೆಲೆ ಸ್ನೇಹಿತರೊಂದಿಗೆ ತುಂಗಾ ಎಡದಂಡೆ ನಾಲೆಯಲ್ಲಿ ಈಜಲು ತೆರಳಿದ್ದ. ಈ ವೇಳೆ ಅವಘಡ ಸಂಭವಿಸಿದೆ.

ಬಾಲಕನ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯಚರಣೆ ನಡೆಸಿದರು. ಕತ್ತಲಾಗಿದ್ದರಿಂದ ಶೋಧ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.