ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022
ಶಿವಮೊಗ್ಗದಲ್ಲಿ ಒಂದೇ ತಿಂಗಳಲ್ಲಿ ಎರಡನೇ KFD ಪ್ರಕರಣ ಪತ್ತೆಯಾಗಿದೆ. ಶಿಕ್ಷಕರೊಬ್ಬರಿಗೆ KFD ಸೋಂಕು (ಮಂಗನ ಕಾಯಿಲೆ) ದೃಢವಾಗಿದೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿದ್ದ ಶಿಕ್ಷಕ, ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ರಕ್ತದ ಮಾದರಿಯನ್ನು KFD ಲ್ಯಾಬ್’ಗೆ ಕಳುಹಿಸಲಾಗಿತ್ತು.
KFD ಪಾಸಿಟಿವ್ ಬಂದ ಹಿನ್ನೆಲೆ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ತಿಂಗಳಲ್ಲಿ ಜಿಲ್ಲೆಯಲ್ಲಿ ಎರಡನೇ KFD ಪ್ರಕರಣ ಪತ್ತೆಯಾಗಿದೆ. ತೀರ್ಥಹಳ್ಳಿಯ ಮಹಿಳೆಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು.
ಇದನ್ನೂ ಓದಿ | ಕೊರೋನ ಆತಂಕದ ಮಧ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಗೆ ಕೆಎಫ್‌ಡಿ ಪಾಸಿಟಿವ್, ತೀರ್ಥಹಳ್ಳಿ ಭಾಗದಲ್ಲಿ ಆತಂಕ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422