ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು KFD ಪ್ರಕರಣ, ಶಿಕ್ಷಕರೊಬ್ಬರಿಗೆ ಸೋಂಕು ದೃಢ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022

ಶಿವಮೊಗ್ಗದಲ್ಲಿ ಒಂದೇ ತಿಂಗಳಲ್ಲಿ ಎರಡನೇ KFD ಪ್ರಕರಣ ಪತ್ತೆಯಾಗಿದೆ. ಶಿಕ್ಷಕರೊಬ್ಬರಿಗೆ KFD ಸೋಂಕು (ಮಂಗನ ಕಾಯಿಲೆ) ದೃಢವಾಗಿದೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿದ್ದ ಶಿಕ್ಷಕ, ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ರಕ್ತದ ಮಾದರಿಯನ್ನು KFD ಲ್ಯಾಬ್’ಗೆ ಕಳುಹಿಸಲಾಗಿತ್ತು.

KFD ಪಾಸಿಟಿವ್ ಬಂದ ಹಿನ್ನೆಲೆ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ತಿಂಗಳಲ್ಲಿ ಜಿಲ್ಲೆಯಲ್ಲಿ ಎರಡನೇ KFD ಪ್ರಕರಣ ಪತ್ತೆಯಾಗಿದೆ. ತೀರ್ಥಹಳ್ಳಿಯ ಮಹಿಳೆಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿತ್ತು.

ಇದನ್ನೂ ಓದಿ | ಕೊರೋನ ಆತಂಕದ ಮಧ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳೆಗೆ ಕೆಎಫ್‌ಡಿ ಪಾಸಿಟಿವ್, ತೀರ್ಥಹಳ್ಳಿ ಭಾಗದಲ್ಲಿ ಆತಂಕ

ABOUT NEW DEC 2021 REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 28, 2022

Leave a Comment