ಹೊಸಕೊಪ್ಪ ತಾಂಡಾದಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌

Published On : ಏಪ್ರಿಲ್ 17, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಹೊಸಕೊಪ್ಪ ತಾಂಡಾ ಗ್ರಾಮದ ಖಾಲಿ ಜಾಗದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು ಮೂರು ಟಿಪ್ಪರ್ ಲೋಡ್ ಮರಳನ್ನು (sand) ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ ಭೂ ವಿಜ್ಞಾನಿ ಪ್ರಿಯಾ ದೊಡ್ಡಗೌಡರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಜಮೀನಿನಲ್ಲಿ ಮರಳು ಪತ್ತೆಯಾಗಿದೆ. ದಾಖಲೆಗಳಿಲ್ಲದ ಕಾರಣ ಅದನ್ನು ವಶಪಡಿಸಿಕೊಳ್ಳಲಾಗಿದೆ.

Tunga-Nagara-Police-Station-Shimoga

ವಶಪಡಿಸಿಕೊಂಡ ಮರಳಿನ ಮೌಲ್ಯ ಸುಮಾರು ₹25,500 ಎಂದು ಅಂದಾಜಿಸಲಾಗಿದೆ. ಸರ್ಕಾರಕ್ಕೆ ವಂಚಿಸಿ ಪರವಾನಗಿ ಇಲ್ಲದೆ ಮರಳು ದಾಸ್ತಾನು ಮಾಡಿದ ಆರೋಪದಡಿ ಮೂವರ ವಿರುದ್ಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶಿವಮೊಗ್ಗದ ಒಂದು ರೈಲಿನ ವೇಳಾಪಟ್ಟಿಯಲ್ಲಿ ಪರಿಷ್ಕರಣೆ, ರೈಲ್ವೆ ಇಲಾಖೆ ಪ್ರಕಟಣೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 17, 2026

Leave a Comment