ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MAY 2021
ಹಳ್ಳಿ ಹಳ್ಳಿಯಲ್ಲೂ ಸೋಂಕು ಹರಡವುದನ್ನು ತಡೆಯಲು ಗ್ರಾಮಸ್ಥರೆ ಸ್ವಯಂ ನಿರ್ಬಂಧಗಳನ್ನು ವಿಧಿಸಿಕೊಳ್ಳುತ್ತಿದ್ದಾರೆ. ಶಿವಮೊಗ್ಗ ತಾಲೂಕಿನ ಹಳ್ಳಿಯೊಂದು ಕೋವಿಡ್ ಸೋಂಕು ವ್ಯಾಪಕಗೊಳ್ಳುವುದನ್ನು ತಡೆಯಲು ಸ್ವಯಂ ಲಾಕ್ ಡೌನ್ ವಿಧಿಸಿಕೊಂಡಿದೆ.
ಗ್ರಾಮದಲ್ಲಿ 40ಕ್ಕೂ ಹೆಚ್ಚು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ಊರಿನ ಪ್ರಮುಖರೊಬ್ಬರು ಕೋವಿಡ್‍ಗೆ ತುತ್ತಾಗಿ ಮೃತರಾಗಿದ್ದಾರೆ. ಆ ಬಳಿಕ ಗ್ರಾಮಸ್ಥರು ಸಭೆ ಸೇರಿ, ಒಂದು ವಾಹನ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ.
ಹೇಗಿದೆ ಸ್ವಯಂ ನಿರ್ಬಂಧ?
ಶಿವಮೊಗ್ಗ ತಾಲೂಕು ಹಾರನಹಳ್ಳಿ ಹೋಬಳಿಯ ನಾರಾಯಣಪುರ ಗ್ರಾಮದಲ್ಲಿ ಸ್ವಯಂ ಲಾಕ್ ಡೌನ್ ವಿಧಿಸಿಕೊಳ್ಳಲಾಗಿದೆ. ಗ್ರಾಮದಲ್ಲಿ ಸೋಂಕು ಕಡಿಮೆಯಾಗುವವರೆಗೆ ಲಾಕ್ ಡೌನ್ ಮುಂದುವರೆಯಲಿದೆ ಎಂದು ಗ್ರಾಮದ ಮುಖಂಡರಲ್ಲಿ ಒಬ್ಬರಾದ ಕುಮಾರ್ ನಾಯ್ಕ ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ಕಠಿಣ ಲಾಕ್‌ಡೌನ್ ಮುಂದುವರಿಕೆ
ನಾರಾಯಣಪುರದಲ್ಲಿ ಸುಮಾರು 350 ಮನೆಗಳಿವೆ. ಒಂದೂವರೆ ಸಾವಿರದಷ್ಟು ಜನಸಂಖ್ಯೆ ಇದೆ. ಸದ್ಯ 40 ರಿಂದ 45 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಸುಮಾರು ಹತ್ತು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರೋನಾಗೆ ತುತ್ತಾಗಿದ್ದ ಗ್ರಾಮದ ಪ್ರಮುಖರಾದ ಹೇಮ್ಲಾನಾಯ್ಕ ಆವರು ಮೃತರಾಗಿದ್ದಾರೆ. ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇದೆ ಕಾರಣಕ್ಕೆ ಸಭೆ ಸೇರಿ ಸ್ವಯಂ ಲಾಕ್ ಡೌನ್‍ಗೆ ಒಳಗಾಗಿದ್ದಾರೆ.
ಅಗತ್ಯ ವಸ್ತು ಖರೀದಿಗೆ ಸಮಯ ನಿಗದಿ
ಪ್ರತಿದಿನ ಬೆಳಗ್ಗೆ 6 ರಿಂದ 9 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಈ ಅವಧಿ ಮೀರಿ ಮನೆಯಿಂದ ಹೊರ ಬಂದರೆ ಎರಡು ಸಾವಿರ ರೂ. ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ. ಬೆಳಗ್ಗೆ ಒಂಭತ್ತು ಗಂಟೆ ಬಳಿಕವು ಅಂಗಡಿ ತೆಗೆದಿದ್ದರೆ ಮಾಲೀಕರಿಗೆ ಹತ್ತು ಸಾವಿರ ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ.
‘ಗ್ರಾಮದಲ್ಲಿ ಬಡವರಿದ್ದಾರೆ. ಅವರಿಗೆ ಸರ್ಕಾರದಿಂದ ರೇಷನ್ ಪೂರೈಕೆ ಮಾಡಲಾಗಿದೆ. ಒಂದು ವೇಳೆ ಇದನ್ನು ಮೀರಿ ಅಗತ್ಯ ವಸ್ತುಗಳ ಬೇಕಿದ್ದರೆ ಊರಿನ ಮುಖಂಡರಿಗೆ ತಿಳಿಸಿದರೆ ದಿನಸಿ ಪೂರೈಕೆಗೆ ವ್ಯವಸ್ಥೆ ಮಾಡುತ್ತೇವೆ’ ಎಂದು ಕುಮಾರ್ ನಾಯ್ಕ ತಿಳಿಸಿದರು.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸಾವಿನ ವಿಚಾರದಲ್ಲಿ ಸುಳ್ಳು ಲೆಕ್ಕ, ಶಾಸಕರಿಂದಲೇ ಗಂಭೀರ ಆರೋಪ
ಜನರು ಹೊರಗೆ ಓಡಾಡದಂತೆ ತಡೆಯಲು ಮತ್ತು ಪರ ಊರಿನ ಜನರು ನಾರಾಯಣಪುರದೊಳಗೆ ಬಾರದಂತೆ ನೋಡಿಕೊಳ್ಳಲು ಕೆಲವು ಯುವಕರಿಗೆ ಜವಾಬ್ದಾರಿ ನೀಡಲಾಗಿದೆ.
ಸ್ವಯಂ ಲಾಕ್ ಡೌನ್ ವಿಧಿಸಿಕೊಂಡು ನಾರಾಯಣಪುರ ಗ್ರಾಮದವರು ಇತರರಿಗೆ ಮಾದರಿಯಾಗಿದೆ. ಗ್ರಾಮಗಳ ಹಂತದಲ್ಲಿ ಈ ಮಾದರಿ ಅನುಸರಿಸಿದರೆ ಜಿಲ್ಲೆಯಲ್ಲಿ ಸೋಂಕು ತಡೆಗೆ ಅನುಕೂಲವಾಗಲಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200