SHIVAMOGGA LIVE NEWS | 8 AUGUST 2023
SHIMOGA : ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಸ್ವಾತಂತ್ರ್ಯ ಹೋರಾಟಗಾರರ (Freedom Fighters) ಭಾವಚಿತ್ರಗಳನ್ನು ಆಯಾ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು (Independence day) ಇಟ್ಟು ಸ್ಮರಣೆ ಮಾಡ ಬೇಕೆಂದು ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ (Shashikumar Gowda) ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
![]() |
ಬ್ರಿಟಿಷರ ಆಳ್ವಿಕೆಯಿಂದ ದೇಶವನ್ನು ಬಂಧಮುಕ್ತಗೊಳಿಸಲು ಹಲವು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಜಿಲ್ಲೆಯಲ್ಲೂ ಹಲವರು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲುಪಾಲಾದರು, ಬಲಿದಾನ ಮಾಡಿದ್ದರು. ಆದರೆ ಯುವ ಜನತೆ ಸ್ವಾತಂತ್ರ್ಯ ಹೋರಾಟಗಾರರನ್ನು ಮರೆತಿದೆ. ಈ ನಿಟ್ಟಿನಲ್ಲಿ ಅವರನ್ನು ನೆನಪಿಸಿಕೊಳ್ಳುವುದು ಮತ್ತು ಗೌರವಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು.
ಇದನ್ನೂ ಓದಿ: ಶಿವಮೊಗ್ಗ ಜೈಲ್ ಕೊಠಡಿಯೊಳಗೆ ಹುಟ್ಟುಹಬ್ಬ ಆಚರಿಸಿ, ಮೊಬೈಲ್‌ನಲ್ಲಿ ಫೋಟೊ ತೆಗೆದುಕೊಂಡ ಕೈದಿಗಳು
ರಾಜ್ಯದ ಎಲ್ಲ ಜಿಲ್ಲೆ ತಾಲೂಕು ಕೇಂದ್ರಗಳಲ್ಲಿ ಸ್ವಾತಂತ್ರ್ಯ ದಿನದಂದು ಆಯಾ ಜಿಲ್ಲೆಗಳ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇಡುವ ಮೂಲಕ ಅವರನ್ನು ಗೌರವಿಸಬೇಕು ಒತ್ತಾಯಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200