BREAKING NEWS – ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಕುಂಸಿ, ಆಯನೂರು ಸುತ್ತಮುತ್ತ ಇಂದು ಸಂಜೆ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಿದೆ. ಇದರಿಂದ ವಿವಿಧೆಡೆ ಆಸ್ತಿಪಾಸ್ತಿ ಹಾನಿ ಉಂಟಾಗಿದೆ. ಸಿಡಿಲು ಬಡಿದು ಸುಮಾರು 40 ಕುರಿಗಳು (Sheeps) ಸಾವನ್ನಪ್ಪಿವೆ. ಅಲ್ಲಲ್ಲಿ ರಸ್ತೆಗೆ ಅಡ್ಡಲಾಗಿ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.
➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಆಯನೂರು ಸುತ್ತಮುತ್ತ ಇಂದು ಸಂಜೆ ಸುಮಾರು ಮುಕ್ಕಾಲು ಗಂಟೆಗು ಹೆಚ್ಚು ಹೊತ್ತು ಭಾರಿ ಮಳೆಯಾಗಿದೆ. ಗುಡುಗು, ಗಾಳಿ ಸಾಹಿತ ಜೋರು ಮಳೆ ಸುರಿದಿದೆ.

ಸಿಡಿಲಿಗೆ ಕುರಿಗಳು ಸಾವು

ಆಯನೂರು ಸಮೀಪದ ಬಾಳೆಕೊಪ್ಪ ಗ್ರಾಮದಲ್ಲಿ ಸಿಡಿಲಿಗೆ ಸುಮಾರು 40 ಕುರಿಗಳು ಸಾವನ್ನಪ್ಪಿವೆ. ಇಲ್ಲಿನ ಹುಚ್ಚಪ್ಪ ಎಂಬುವವರಿಗೆ ಸೇರಿದ ಕುರಿಗಳನ್ನು ಗುಡ್ಡದ ಬಯಲಿನಲ್ಲಿ ಮೇಯಿಸುತ್ತಿದ್ದರು. ಈ ಸಂದರ್ಭ ಗುಡುಗು ಸಹಿತ ಮಳೆ ಶುರುವಾಗಿದೆ.

Sheeps-succumbed-to-lighting-during-rain-near-ayanuru

ಇದನ್ನೂ ಓದಿ » ಭದ್ರಾವತಿಯಲ್ಲಿ ಬೆಳ್ಳಂಬೆಳಗ್ಗೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸ್‌, ಏನಿದು ಕೇಸ್‌?

ಈ ವೇಳೆ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ. ಇದರಿಂದ ರೈತ ಹುಚ್ಚಪ್ಪ ಅವರಿಗೆ ಲಕ್ಷಾಂತರ ರೂ. ನಷ್ಟವಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು, ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಇನ್ನು, ಗಾಳಿ, ಮಳೆಯಿಂದಾಗ ಈ ಭಾಗದಲ್ಲಿ ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment