ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JUNE 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವತ್ತು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಕಾಮಗಾರಿ ಪರಿಶೀಲನೆ ನಡೆಸಿದರು. ಮುಂದಿನ ವರ್ಷ ಜೂನ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಶಿವಮೊಗ್ಗ ತಾಲೂಕು ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಇವತ್ತು ರನ್ ವೇ ಕಾಮಗಾರಿ ಪರಿಶೀಲನೆ ನಡೆಸಿದ ಸಿಎಂ, ಅಧಿಕಾರಿಗಳು, ಗುತ್ತಿಗೆದಾರರಿಂದ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು.
ವಿನ್ಯಾಸ ಅನವಾರಣ ಮಾಡಿದ ಸಿಎಂ
ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಕಾಮಗಾರಿ ಆರಂಭವಾಗಲಿದೆ. ಇವತ್ತು ಸಿಎಂ ಅದರ ನೀಲನಕ್ಷೆಯನ್ನು ಅನಾವರಣಗೊಳಿಸಿದರು. ಡಿಜಿಟಲ್ ನೀಲನಕ್ಷೆ ಉದ್ಘಾಟಿಸಿ ವೀಕ್ಷಿಸಿದರು.
384 ಕೋಟಿಯ ವಿಮಾನ ನಿಲ್ದಾಣ
ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, 384 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾರ್ಯ ನಡೆಯುತ್ತಿದೆ. 216.06 ಕೊಟಿ ರೂ. ವೆಚ್ಚದಲ್ಲಿ ರನ್ ವೇ ಮತ್ತು ಇತರೆ ಕಾಮಗರಿಗಳು ನಡೆಯುತ್ತಿವೆ. 110 ಕೋಟಿ ರೂ. ವೆಚ್ಚದಲ್ಲಿ ಟರ್ಮಿನಲ್, ಏರ್ ಟ್ರಾಫಿಕ್ ಕಂಟ್ರೋಲ್ ಕಟ್ಟಡ ನಿರ್ಮಿಸಲಾಗುತ್ತಿದೆ. ಈಗಾಗಲೇ 900 ಮೀಟರ್ ರನ್ ವೇ ಕಾಮಗಾರಿಯ ಮಣ್ಣು ಅಗೆತ ಮತ್ತು ಎಂಬ್ಯಾಕ್ಟ್‍ಮೆಂಟ್ ಕಾಮಗಾರಿ ಮುಗಿದಿದೆ. 900 ಮೀಟರ್‍ನಿಂದ 2940 ಮೀಟರ್‍ವರೆಗಿನ ಮಣ್ಣು ಅಗೆತ ಮತ್ತು ಎಂಬ್ಯಾಕ್ಟ್‍ಮೆಂಟ್ ನಡೆಯುತ್ತಿದೆ ಎಂದು ತಿಳಿಸಿದರು.
ಎರಡು ದಿನದ ಹಿಂದೆ ಕರಾರು
ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡರೆ ಕೈಗಾರಿಕೋದ್ಯಮಿಗಳು ಶಿವಮೊಗ್ಗಕ್ಕೆ ಬರಲು ಅನುಕೂಲವಾಗಲಿದೆ. ಹತ್ತಾರು ಸಾವಿರ ಯುವಕರಿಗೆ ಉದ್ಯೋಗ ಸಿಗಲಿದೆ. ಬೆಂಗಳೂರು ನಂತರ ಅತ್ಯಂತ ಉತ್ತಮ ವಿಮಾನ ನಿಲ್ದಾಣ ಇದಾಗಲಿದೆ. ಪ್ರಯಾಣಿಕರ ಟರ್ಮಿನಲ್, ಎಟಿಸಿ, ಮತ್ತಿತರ ಮೂಲಸ ಸೌಕರ್ಯದ ಪ್ಯಾಕೇಜ್ 2 ಕಾಮಗಾರಿ ಕರಾರು ಪತ್ರಕ್ಕೆ ಎರಡು ದಿನದ ಹಿಂದೆ ಸಹಿ ಹಾಕಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಂಸದ ಬಿ.ವೈ.ರಾಘವೇಂದ್ರ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಸಿಇಒ ವೈಶಾಲಿ ಸೇರಿದಂತೆ ಹಲವರು ಇದ್ದರು.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






