ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 MARCH 2023
SHIMOGA : ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸರು ದಿಢೀರ್ ದಾಳಿ (Raid) ನಡೆಸಿ ಪರಿಶೀಲನೆ ನಡೆಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ದಿಢೀರ್ ದಾಳಿ
ಸೋಗಾನೆ ಬಳಿ ಇರುವ ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳಗ್ಗೆ ದಿಢೀರ್ ದಾಳಿ (Raid) ನಡೆಸಲಾಯಿತು. ಕಾರಾಗೃಹದಲ್ಲಿರುವ ಪ್ರತಿ ಸೆಲ್ ನಲ್ಲಿಯು ಪೊಲೀಸರು ತಪಾಸಣೆ ಮಾಡಿದರು. ಆದರೆ ಜೈಲಿನಲ್ಲಿ ಯಾವುದೆ ಅಕ್ರಮ ವಸ್ತುಗಳು ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ದಾಳಿಗೆ ಕಾರಣವೇನು?
ಇನ್ನು, ದಾಳಿ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಪೊಲೀಸ್ ಇಲಾಖೆ, ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ತಿಳಿಸಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಅವರು ದಾಳಿ ನಡೆಸಿದರು.
ತುಂಗಾ ನಗರ ಇನ್ಸ್ ಪೆಕ್ಟರ್ ಮಂಜುನಾಥ್, ಕೋಟೆ ಠಾಣೆ ಇನ್ಸ್ ಪೆಕ್ಟರ್ ಶಿವಪ್ರಸಾದ್ ರಾವ್, ದೊಡ್ಡಪೇಟೆ ಠಾಣೆ ಇನ್ಸ್ ಪೆಕ್ಟರ್ ಅಂಜನ್ ಕುಮಾರ್, ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಗುರು ಬಸವರಾಜ್, ಮಹಿಳಾ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಕುಮಾರ್, ಜಯನಗರ ಠಾಣೆ ಇನ್ಸ್ ಪೆಕ್ಟರ್ ಗಜೇಂದ್ರಪ್ಪ, ಡಿಎಆರ್ ಪೊಲೀಸ್ ಘಟಕದ ಆರ್.ಪಿ.ಐ ಶಿವಾನಂದ ಗುಣದಾಳ್, 60 ಪೊಲೀಸ್ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿಗೆ ಗೋ ಮೂತ್ರ ಸಿಂಪಡಿಸಿದ ಹಿಂದೂ ಕಾರ್ಯಕರ್ತರು, ಕಾರಣವೇನು?