ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 FEBRURARY 2023
SHIMOGA : ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದರು. ಈ ವೇಳೆ ಟರ್ಮಿನಲ್ ವೀಕ್ಷಣೆ, ಅಧಿಕಾರಿಗಳ ಜೊತೆ ವಿಮಾನ ನಿಲ್ದಾಣದ (Airport Inauguration) ಕುರಿತು ಮಾಹಿತಿ ಪಡೆದರು. ವೇದಿಕೆ ಕಾರ್ಯಕ್ರಮದಲ್ಲಿಯು ಪಾಲ್ಗೊಂಡಿದ್ದರು. ಇದರ ಫೋಟೊ ನ್ಯೂಸ್ ಇಲ್ಲಿದೆ.
1 ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport Inauguration) ಬಂದಿಳಿದ ಪ್ರಧಾನಿ ನರೇಂದ್ರ ಮೋದಿ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ಪ್ರಧಾನಿಯನ್ನು ಸ್ವಾಗತಿಸಿದರು. 2 ವಿಮಾನ ನಿಲ್ದಾಣದ ಹೈಟೆಕ್ ಟರ್ಮಿನಲ್ ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ. ಟರ್ಮಿನಲ್ ಒಳಗಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. 3 ಟರ್ಮಿನಲ್ ಒಳಾಂಗಣದಲ್ಲಿ ಇರಿಸಲಾಗಿದ್ದ ವಿಮಾನ ನಿಲ್ದಾಣದ ಮಾಡಲ್ ಅನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸಿದರು. 4 ಸ್ವಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳನ್ನು ಟರ್ಮಿನಲ್ ನಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಇವುಗಳನ್ನು ವೀಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರಿಂದ ಮಾಹಿತಿ ಪಡೆದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮೋದಿ, ಕನ್ನಡದಲ್ಲೇ ಭಾಷಣ ಆರಂಭ, ರಾಷ್ಟ್ರಕವಿಯ ಸ್ಮರಣೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422