ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಧಾನಿ, ಫೋಟೊಗಳ ಮೂಲಕ ಮೋದಿ ಭೇಟಿಯ ಕಂಪ್ಲೀಟ್ ನ್ಯೂಸ್

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 27 FEBRURARY 2023

SHIMOGA : ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದರು. ಈ ವೇಳೆ ಟರ್ಮಿನಲ್ ವೀಕ್ಷಣೆ, ಅಧಿಕಾರಿಗಳ ಜೊತೆ ವಿಮಾನ ನಿಲ್ದಾಣದ (Airport Inauguration) ಕುರಿತು ಮಾಹಿತಿ ಪಡೆದರು. ವೇದಿಕೆ ಕಾರ್ಯಕ್ರಮದಲ್ಲಿಯು ಪಾಲ್ಗೊಂಡಿದ್ದರು. ಇದರ ಫೋಟೊ ನ್ಯೂಸ್ ಇಲ್ಲಿದೆ.

1 ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport Inauguration) ಬಂದಿಳಿದ ಪ್ರಧಾನಿ ನರೇಂದ್ರ ಮೋದಿ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ಪ್ರಧಾನಿಯನ್ನು ಸ್ವಾಗತಿಸಿದರು.

modi8

2 ವಿಮಾನ ನಿಲ್ದಾಣದ ಹೈಟೆಕ್ ಟರ್ಮಿನಲ್ ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ. ಟರ್ಮಿನಲ್ ಒಳಗಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

modi2

3 ಟರ್ಮಿನಲ್ ಒಳಾಂಗಣದಲ್ಲಿ ಇರಿಸಲಾಗಿದ್ದ ವಿಮಾನ ನಿಲ್ದಾಣದ ಮಾಡಲ್ ಅನ್ನು  ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸಿದರು.

modi1

4 ಸ್ವಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳನ್ನು ಟರ್ಮಿನಲ್ ನಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಇವುಗಳನ್ನು ವೀಕ್ಷಿಸಿದ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರಿಂದ ಮಾಹಿತಿ ಪಡೆದರು.

modi3

5 ಶಿವಮೊಗ್ಗ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇದ್ದರು.

modi7

6 ವಿಮಾನ ನಿಲ್ದಾಣದ ಆವರಣದಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯ ಜನರು ಭಾಗವಹಿಸಿದ್ದರು.

modi4

7 ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಡಕೆ ಹಾರ, ಶ್ರೀಗಂಧದಿಂದ ತಯಾರಿಸಿದ ವಿಮಾನ ನಿಲ್ದಾಣದ ಮಾದರಿಯನ್ನು ಉಡುಗೊರೆಯಾಗಿ ನೀಡಿ ಸನ್ಮಾನಿಸಲಾಯಿತು.

modi5

8 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಧಾನಿ ಮೋದಿ ಅವರು ಸನ್ಮಾನಿಸಿದರು. ಯಡಿಯೂರಪ್ಪ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮೋದಿ, ಕನ್ನಡದಲ್ಲೇ ಭಾಷಣ ಆರಂಭ, ರಾಷ್ಟ್ರಕವಿಯ ಸ್ಮರಣೆ

modi6

JNNCE College Shimoga VTU Ranking

Leave a Comment