ಶಿವಮೊಗ್ಗದ ಟೋಲ್‌ ಗೇಟ್‌ಗೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ, ಪರಿಶೀಲನೆ, ಕಾರಣವೇನು?

ಶಿವಮೊಗ್ಗ: ಸಂಚಾರ ನಿಯಮಗಳ ಪಾಲನೆ ಹಾಗೂ ರಸ್ತೆ ಸುರಕ್ಷತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌ ಸುತ್ತುಕೋಟೆ ಟೋಲ್ ಗೇಟ್ (toll gate) ಬಳಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಅಪಘಾತಗಳನ್ನು ತಡೆಗಟ್ಟಲು ಅತ್ಯಗತ್ಯವಾಗಿರುವ ಲೈನ್ ಡಿಸಿಪ್ಲೀನ್ (ಪಥ ಶಿಸ್ತು) ಕುರಿತು ವಾಹನ ಚಾಲಕರು, ಸವಾರರು ಹಾಗೂ ಪ್ರಯಾಣಿಕರಿಗೆ ಪೊಲೀಸರು ಮಾಹಿತಿ ನೀಡಿದರು. ಇದೇ ವೇಳೆ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್‌ ಅವರು ನಿಯಮಗಳ ಕುರಿತಾದ ಕರಪತ್ರಗಳನ್ನು ಹಂಚುವ ಮೂಲಕ ಶಿಸ್ತುಬದ್ಧ ಚಾಲನೆಗೆ ಮನವಿ ಮಾಡಿದರು.

Shimoga-SP-Nikhil-IPS-visit-to-Toll-Plaza

ಟೋಲ್ ಗೇಟ್‌ನಲ್ಲಿ ಕೈಗೊಳ್ಳಲಾಗಿರುವ ಸುರಕ್ಷತಾ ಕ್ರಮಗಳು, ಸಿಸಿಟಿವಿ ಕ್ಯಾಮೆರಾಗಳ ವ್ಯವಸ್ಥೆಯನ್ನು ವೀಕ್ಷಿಸಿದರು. ವಾಹನಗಳ ಸುಗಮ ಸಂಚಾರಕ್ಕೆ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಟೋಲ್ ಸಿಬ್ಬಂದಿಗೆ ಸಲಹೆ ನೀಡಿದರು. ಡಿವೈಎಸ್‌ಪಿ ಸಂಜೀವ್‌ ಕುಮಾರ್‌ ಇದ್ದರು.

ಇದನ್ನೂ ಓದಿ – ಶಿವಮೊಗ್ಗದ ವಿದ್ಯಾರ್ಥಿನಿ ರಾಜ್ಯಕ್ಕೆ ಫಸ್ಟ್‌, ತಾಯಿಯಂತೆ ರ‍್ಯಾಂಕ್ ಗಳಿಸಿದ ಮಾಜಿ MLA ಮೊಮ್ಮಗಳು

Shivamogga Live reached 2.8 million views in January-2026 - Editor : Nitin Kaidotlu
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : February 10, 2026 at 9:40 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಫೆಬ್ರವರಿ 10, 2026

Leave a Comment