ಗದ್ದೆಯಲ್ಲಿ ಬೆಳೆದಿದ್ದ ಭತ್ತದ ಫಸಲು ಕಟಾವು ಮಾಡಿ ಕಳ್ಳತನ, ಎಲ್ಲಿ? ಆಗಿದ್ದೇನು?

ಶಿವಮೊಗ್ಗ: ತಾಲ್ಲೂಕಿನ ಮಂಡೇನಕೊಪ್ಪ ಗ್ರಾಮದಲ್ಲಿ 7 ಎಕರೆ 35 ಗುಂಟೆ ಜಮೀನಿನಲ್ಲಿ ಬೆಳೆದಿದ್ದ ಭತ್ತದ ಫಸಲನ್ನು ಕಟಾವು ಮಾಡಿ ಕಳ್ಳತನ ಮಾಡಲಾಗಿದೆ. ಅಂದಾಜು ₹6.50 ಲಕ್ಷ ಮೌಲ್ಯದ ಭತ್ತ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಮುರಳೀಧರ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಈ ಕಳ್ಳತನವಾಗಿದೆ. ಜಮೀನಿನಲ್ಲಿ ಬೆಳೆದಿದ್ದ ಭತ್ತದ ಬೆಳೆಯನ್ನು ಕೂಲಿ ಕೆಲಸಕ್ಕೆ ಬರುತ್ತಿದ್ದ ಕೆಲವರು ಕಟಾವು ಮಾಡಿಕೊಂಡು ಹೋಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದರಿಂದ ಮುರಳೀಧರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Tunga-Nagara-Police-Station-Shimoga