ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಚಲಿಸುತ್ತಿದ್ದ KSRTC ಬಸ್‌ ಮೇಲೆ ಕಲ್ಲು ತೂರಿದ ಯುವಕ, ಏನಿದು ಪ್ರಕರಣ?

ಶಿವಮೊಗ್ಗ: ತಾಲ್ಲೂಕಿನ ಶಿವಮೊಗ್ಗ-ಹೊನ್ನಾಳಿ ರಸ್ತೆಯ ತ್ಯಾವರೆಚಟ್ನಳ್ಳಿ ಪೆಟ್ರೋಲ್ ಬಂಕ್ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮೇಲೆ ವ್ಯಕ್ತಿಯೊಬ್ಬ ಕಲ್ಲು ತೂರಾದಾನೆ. ಘಟನೆಯಲ್ಲಿ ಬಸ್ಸಿನ ಮುಂಭಾಗದ ಗಾಜು ಬಿರುಕು ಬಿಟ್ಟಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹುಬ್ಬಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್ಸಿಗೆ ರಸ್ತೆ ಬದಿ ತೆರಳುತ್ತಿದ್ದ ಶಿವಮೊಗ್ಗದ ರಾಗಿಗುಡ್ಡದ ಪವನ್ ಎಂಬಾತ ಏಕಾಏಕಿ ಕಲ್ಲು ತೂರಿದ್ದಾನೆ. ಇದರಿಂದ ಬಸ್ಸಿನ ಮುಂಭಾಗದ ಗಾಜು ಒಡೆದು ಅಂದಾಜು ₹20,000 ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

KSRTC-Bus-General-Image-Shimoga-Bangalore

ಕೂಡಲೆ ಬಸ್‌ ನಿಲ್ಲಿಸಿ ಪವನ್‌ನನ್ನು ಹಿಡಿದು ಪ್ರಶ್ನಿಸಿದಾಗ ಚಾಲಕ, ನಿರ್ವಾಹಕರಿಗೆ ಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಚಾಲಕ ಶಂಕರಪ್ಪ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.