ಶಾಲೆಯಲ್ಲಿ ದಿಢೀರ್‌ ಕುಸಿದು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕುಂಸಿ: ಶಾಲೆಯಲ್ಲಿ ಸಹಪಾಠಿಗಳ ಚೆಸ್ ಆಟ ನೋಡುತ್ತಾ ನಿಂತಿದ್ದ ವೇಳೆ ಏಕಾಏಕಿ ಕುಸಿದುಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ತಾಲೂಕು ಆಯನೂರು ಬಳಿಯ ತಮ್ಮಡಿಹಳ್ಳಿಯಲ್ಲಿ ನಡೆದಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತಮ್ಮಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ವಿನಯ್ ಜೆ.ಕೆ. (15) ಮೃತ ದುರ್ದೈವಿ. ಮೂಲತಃ ಶಿಕಾರಿಪುರ ತಾಲೂಕಿನ ನಿವಾಸಿಯಾಗಿರುವ ವಿನಯ್, ತಮ್ಮಡಿಹಳ್ಳಿಯಲ್ಲಿರುವ ಅಜ್ಜನ ಮನೆಯಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದನು.

SSLC-Student-Vinay-JK-breathed-last-at-Tammadihalli-School

ದಿಢೀರ್‌ ಕುಸಿದು ಬಿದ್ದ ವಿದ್ಯಾರ್ಥಿ

ಸೋಮವಾರ ಸಂಜೆ ಶಾಲೆಯಲ್ಲಿ ಸಹಪಾಠಿಗಳು ಆಡುತ್ತಿದ್ದ ಚೆಸ್ ಆಟವನ್ನು ವಿನಯ್ ನೋಡುತ್ತಾ ನಿಂತಿದ್ದನು. ಈ ವೇಳೆ ಏಕಾಏಕಿ ವಿನಯ್ ಕುಸಿದುಬಿದ್ದಿದ್ದಾನೆ. ತಕ್ಷಣ ಶಿಕ್ಷಕರು ಆತನನ್ನು ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆದರೆ ವಿನಯ್ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲು ಯತ್ನಿಸಲಾಗಿದೆ. ಆದರೆ ಮಾರ್ಗಮಧ್ಯೆ ವಿನಯ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನಂತರ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ತರಲಾಯಿತು. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.