ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020
ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಹೊಳಲೂರು ಗ್ರಾಮ ಪಂಚಾಯತ್ನಲ್ಲಿ ಸ್ವಚ್ಚ ಸಂಕೀರ್ಣ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯ 271 ಗ್ರಾಮ ಪಂಚಾಯತ್ಗಳ ಪೈಕಿ 201 ಗ್ರಾಮ ಪಂಚಾಯತ್ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಈಗಾಗಲೇ ಜಮೀನು ಗುರುತಿಸಲಾಗಿದ್ದು, ಕೆಲವು ಕಡೆಗಳಲ್ಲಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಪ್ರತಿ ಗ್ರಾಮ ಪಂಚಾಯತ್ಗೆ ತಲಾ 20 ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ಮಾತ್ರವಲ್ಲದೆ ಪ್ಲಾಸ್ಟಿಕ್ನಂತಹ ತ್ಯಾಜ್ಯಗಳನ್ನು ಮರು ಬಳಕೆ ಮಾಡುವ ವಿಧಾನಗಳನ್ನು ಸಹ ಇಲ್ಲಿ ಅಳವಡಿಸಲು ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.
ಕಸ ವಿಲೇವಾರಿ ಬಗ್ಗೆ ಪ್ರತಿಯೊಬ್ಬರಿಗೂ ಅರಿವು
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಹ ಘನತ್ಯಾಜ್ಯ ವಿಲೇವಾರಿ ಘಟಕಗಳ ಸಮರ್ಪಕವಾದ ಅನುಷ್ಟಾನದಿಂದ ನಮ್ಮ ಗ್ರಾಮೀಣ ಪ್ರದೇಶಗಳು ಸ್ವಚ್ಛ ಸುಂದರ ಆರೋಗ್ಯಪೂರ್ಣವಾಗಲು ಸಾಧ್ಯವಾಗಲಿದೆ. ಕಸ ವಿಲೇವಾರಿ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಆಕರ್ಷಕ ವಸ್ತು ಪ್ರದರ್ಶನ
ಅತಿ ಹೆಚ್ಚು ಬಚ್ಚಲು ಗುಂಡಿಗಳನ್ನು ನಿರ್ಮಿಸಿದ ಸೊರಬ ತಾಲೂಕು ಪಂಚಾಯತ್ ಹಾಗೂ ಶಿಕಾರಿಪುರ ತಾಲೂಕಿನ ಮುಡುಬ ಸಿದ್ದಾಪುರ ಗ್ರಾಮ ಪಂಚಾಯತ್ ಆಡಳಿತವನ್ನು ಸಚಿವರು ಈ ಸಂದರ್ಭದಲ್ಲಿ ಸನ್ಮಾನಿಸಿದರು. ಕಸ ವಿಲೇವಾರಿ ಹಾಗೂ ತ್ಯಾಜ್ಯಗಳ ಸಮರ್ಪಕ ಬಳಕೆ ಕುರಿತು ವಿವಿಧ ಗ್ರಾಮ ಪಂಚಾಯತ್ಗಳು ಸಜ್ಜುಗೊಳಿಸಿದ್ದ ವಸ್ತು ಪ್ರದರ್ಶನ ಮಳಿಗೆಗಳು ಆಕರ್ಷಕವಾಗಿದ್ದವು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಸ್ವಾಗತಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯ ಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಸುವರ್ಣಾ ಶಂಕರ್, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸದಸ್ಯ ಕೆ.ಇ.ಕಾಂತೇಶ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422