ಶಿವಮೊಗ್ಗ ಲೈವ್.ಕಾಂ | SHIMOGA | 22 ಅಕ್ಟೋಬರ್ 2019
ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಮನೆಗಳನ್ನು ತಹಶೀಲ್ದಾರ್ ಗಿರೀಶ್ ನೇತೃತ್ವದಲ್ಲಿ ಇವತ್ತು ತೆರವು ಮಾಡಲಾಯಿತು. ಈ ವೇಳೆ ಸ್ಥಳೀಯರ ವಿರೋಧದಿಂದಾಗಿ ಕೆಲಕಾಲ ಹೈಡ್ರಾಮಾ ನಡೆಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಿರೂಪಿನಕೊಪ್ಪದ ಸರ್ವೆ ನಂಬರ್ 6ರಲ್ಲಿ ಮಹಾನಗರ ಪಾಲಿಕೆ ವತಿಯಿಂದ ಹತ್ತು ಮನೆಗಳ ತೆರವು ಮಾಡಲಾಗುತ್ತಿದೆ. ಮನೆ ತೆರವು ಮಾಡಲು ಜೆಸಿಬಿ ಆಗಮಿಸುತ್ತಿದ್ದಂತೆ ನಿವಾಸಿಗಳು ವಿರೋಧ ವ್ಯಕ್ತಪಡಿಸಿದರು. ಮನೆಯಿಂದ ಹೊರಬಾರದೆ ತೆರವು ಕಾರ್ಯಾಚರಣೆಗೆ ತಡೆಯೊಡ್ಡಿದರು.
ಪೊಲೀಸರು ಮಧ್ಯಪ್ರವೇಶಿಸಿ ಸ್ಥಳೀಯರನ್ನು ಮನವೊಲಿಸಿ ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು. ತಹಶೀಲ್ದಾರ್ ಗಿರೀಶ್ ನೇತೃತ್ವದಲ್ಲಿ, ಮಹಾನಗರ ಪಾಲಿಕೆ ಅಧಿಕಾರಿಗಳು ಮನೆಗಳ ತೆರವು ಮಾಡಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]