SHIMOGA, 3 SEPTEMBER 2024 : ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮೈಸೂರಿಗೆ ತೆರಳಿದ್ದ ವೇಳೆ ಮನೆಯ ಬಾಗಿಲಿನ ಬೀಗ ಮುರಿದು (Theft) ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಹರಕೆರೆ ಗ್ರಾಮದ ವೀರೇಶ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.
ವೀರೇಶ್ ಅವರ ಕುಟುಂಬದವರು ಆ.31ರಂದು ರಾತ್ರಿ ಮೈಸೂರಿಗೆ ತೆರಳಿದ್ದರು. ಮರುದಿನ ಬೆಳಗ್ಗೆ ಎದುರು ಮನೆಯವರು ಕರೆ ಮಾಡಿ, ಕಳ್ಳತನವಾಗಿರುವ ಕುರಿತು ಮಾಹಿತಿ ನೀಡಿದ್ದರು. ಕೂಡಲೆ ಮೈಸೂರಿನಿಂದ ವೀರೇಶ್ ಅವರು ಹಿಂತಿರುಗಿದ್ದರು. ಬಾಗಲಿನ ಬೀಗವನ್ನು ಮೀಟಿ ತೆಗೆದು ಒಳ ಹೋಗಿದ್ದ ಕಳ್ಳರು 3.66 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದರು.
![]() |
ಏನೆಲ್ಲ ಕಳ್ಳತನವಾಗಿದೆ?
ಒಳ ಮನೆಯಲ್ಲಿದ್ದ ಬೀರುವಿನಲ್ಲಿ ಇಟ್ಟಿದ್ದ ಚಿನ್ನದ ಕಿವಿ ಓಲೆಗಳು, ಮಾಂಗಲ್ಯ ಸರ, ಉಂಗುರಗಳು ಕಳ್ಳತನವಾಗಿದೆ. 85 ಸಾವಿರ ರೂ. ನಗದು ಕೂಡ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ | ಇವತ್ತು ವಾರ್ಷಿಕ ಮಹಾಸಭೆ – 3 ಫಟಾಫಟ್ ನ್ಯೂಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200