ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಶಿವಮೊಗ್ಗ: ತಮ್ಮಡಿಹಳ್ಳಿ ಗ್ರಾಮದಲ್ಲಿ ಮನೆಯ ಹಿಂಬಾಗಿಲಿನ ಮೂಲಕ ಒಳಗೆ ನುಗ್ಗಿರುವ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ (gold jewelry) ಹಾಗೂ ನಗದು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ತಮ್ಮಡಿಹಳ್ಳಿಯ ಮಂಜುನಾಥ್‌ ಮತ್ತು ಅವರ ಪತ್ನಿ ಕೆಲಸಕ್ಕೆ ತೆರಳಿದ್ದರು. ಮಗಳು ಶಿವಮೊಗ್ಗದ ಕಾಲೇಜಿಗೆ ತೆರಳಿದ್ದರು. ಮಧ್ಯಾಹ್ನ ಮಂಜುನಾಥ್‌ ಅವರ ಪತ್ನಿ ಮನೆಗೆ ಬಂದಾಗ ಹಿಂಬಾಗಿಲು ತೆರೆದಿತ್ತು. ತಾವೇ ಮರೆತು ಬಿಟ್ಟು ಹೋಗಿರಬಹುದು ಎಂದುಕೊಂಡು ಅವರು ಬಾಗಿಲು ಹಾಕಿದ್ದರು.

KUMSI-NEWS

ಕಾಲೇಜಿನಿಂದ ಮಗಳು ಬಂದಾಗ ಬೀರುವಿನಲ್ಲಿಟ್ಟಿದ್ದ ಸುಮಾರು ₹5,00,000 ಲಕ್ಷ ಮೌಲ್ಯದ 36 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಹಾಗೂ ಪೂಜಾ ಕೋಣೆಯಲ್ಲಿದ್ದ ಹುಂಡಿಯನ್ನು ಒಡೆದು ಅದರಲ್ಲಿದ್ದ ₹4,000 ರೂಪಾಯಿ ನಗದು ಕಳ್ಳತನ ಆಗಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆ ಸಂಬಂಧ ಕುಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 24, 2026 at 10:00 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 24, 2026

Leave a Comment