SHIMOGA NEWS, 23 SEPTEMBER 2024 : ತಿರುಪತಿ ಲಡ್ಡು (Laddu) ಪ್ರಸಾದದ ವಿಚಾರದಲ್ಲಿ ಅಪಪ್ರಚಾರವಾಗಿದೆ. ಇದರ ಪ್ರಾಯಶ್ಚಿತ್ತ, ದುಷ್ಟದಮನ ಮತ್ತು ಆಧ್ಯಾತ್ಮಿಕ ಶಕ್ತಿವರ್ಧನೆಗಾಗಿ ಶಿವಮೊಗ್ಗದ ಕೂಡಲಿ ಶೃಂಗೇರಿ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ಅಭಿನವ ಶಂಕರಭಾರತೀ ಸ್ವಾಮೀಜಿ ಅವರು ಉಪವಾಸ ಮತ್ತು ಮೌನವ್ರತ ಕೈಗೊಂಡಿದ್ದಾರೆ.
ಕೂಡಲಿ ಮಠದಲ್ಲಿ ಶ್ರೀ ಅಭಿನವ ಶಂಕರಭಾರತೀ ಸ್ವಾಮೀಜಿ ಅವರು ಇಂದಿನಿಂದ ಮೂರು ದಿನ ಉಪವಾಸ ಮತ್ತು ಮೌನವ್ರತ ಆರಂಭಿಸಿದ್ದಾರೆ. ಈ ಸಂಬಂಧ ಮಠದ ವತಿಯಿಂದ ಪ್ರಕಟಣೆ ಹೊರಡಿಸಲಾಗಿದೆ.
ಪ್ರಕಟಣೆಯಲ್ಲಿ ಏನಿದೆ?
ತಿರುಪತಿಯಲ್ಲಿ ನಡೆದಿರುವುದು ಸಸ್ಯಾಹಾರ, ಮಾಂಸಾಹಾರ ಎಂಬ ಚರ್ಚೆ ಮಾಡುವಂತಹ ಸಾಮಾನ್ಯ ಘಟನೆಯಲ್ಲ. ಅಲ್ಲಿ ನಡೆದಿರುವುದು ನಂಬಿಕೆ ದ್ರೋಹ. ಹಿಂದೂ ಸಮಾಜದ ಒಟ್ಟಾರೆ ಬಲಹೀನತೆ ಮೇಲೆ ದುರುಳರು ಮಾಡರುವ ಅಟ್ಟಹಾಸ ಎಂದು ಸ್ವಾಮೀಜಿ ತಿಳಿಸಿದ್ದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದೇವಸ್ಥಾನಗಳ ಮೇಲೆ ಸರ್ಕಾರದ ಹಿಡಿತ ಹಿಂತೆಗೆದುಕೊಳ್ಳಬೇಕು ಎಂದು ಸಮಾಜ ಸರ್ಕಾರವನ್ನು ಒತ್ತಾಯಿಸಬೇಕು. ಅಲ್ಲದೆ ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕಿದೆ. ಹಾಗಾಗಿ ಎಲ್ಲರು ತಮ್ಮ ಮನೆಯಲ್ಲಿಯೇ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಿದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ತಾಲೂಕು, ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್ ಇರಲ್ಲ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200