ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳು ಓಪನ್, ಎಷ್ಟು ನೀರು ಹೊರಬಿಡಲಾಗ್ತಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು 10 ಕ್ರಸ್ಟ್ ಗೇಟ್‌ಗಳನ್ನು ಮೇಲೆತ್ತಲಾಗಿದೆ. ಪ್ರಸ್ತುತ 18,051 ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಈಗ ಎಷ್ಟಿದೆ ಒಳ ಹರಿವು?

ಜಲಾಶಯಕ್ಕೆ ಪ್ರಸ್ತುತ 20,565 ಕ್ಯೂಸೆಕ್ ಒಳಹರಿವು ಹರಿದು ಬರುತ್ತಿದೆ. ಹೀಗಾಗಿ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಕ್ರಸ್ಟ್ ಗೇಟ್‌ಗಳು ಹಾಗೂ ಪವರ್ ಹೌಸ್ ಮೂಲಕ ಒಟ್ಟು 18,051 ಕ್ಯೂಸೆಕ್ ನೀರನ್ನು ತುಂಗಾ ನದಿಗೆ ಹೊರಬಿಡಲಾಗುತ್ತಿದೆ.

Tunga-Dam-10-crust-gates-opened.

ಜಲಾಶಯದ ಗರಿಷ್ಠ ಮಟ್ಟ 588.24 ಮೀಟರ್ ಆಗಿದ್ದು, ಪ್ರಸ್ತುತ ನೀರಿನ ಮಟ್ಟ 588.18 ಮೀಟರ್ ತಲುಪಿದೆ. ಜಲಾಶಯವು ಭರ್ತಿಯಾಗಿದೆ. ಒಟ್ಟು 3.24 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 3.206 ಟಿಎಂಸಿ ನೀರು ಸಂಗ್ರಹವಾಗಿದೆ.

ಕಳೆದ ವರ್ಷ ಎಷ್ಟಿತ್ತು ಒಳ ಹರಿವು?

ಕಳೆದ ವರ್ಷ ಇದೇ ದಿನ ಜಲಾಶಯದ ಮಟ್ಟ 587.54 ಮೀಟರ್ ಇತ್ತು ಹಾಗೂ ಒಳಹರಿವು 46,042 ಕ್ಯೂಸೆಕ್ ಮತ್ತು ಹೊರಹರಿವು 38,345 ಕ್ಯೂಸೆಕ್‌ನಷ್ಟಿತ್ತು ಎಂದು ಜಲಾಶಯದ ಮೂಲಗಳು ತಿಳಿಸಿವೆ. ನದಿ ಪಾತ್ರದ ಸಾರ್ವಜನಿಕರು ಹಾಗೂ ರೈತರು ಜಾಗರೂಕರಾಗಿರಲು ಇಲಾಖೆ ಸೂಚಿಸಿದೆ.