ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021
ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯದಿಂದ ಗಂಟೆ ಗಂಟೆಗೂ ಹೆಚ್ಚು ನೀರನ್ನು ಹೊರಗೆ ಬಿಡಲಾಗುತ್ತಿದೆ.
ರಾತ್ರಿ 10 ಗಂಟೆಯಿಂದ ತುಂಗಾ ಡ್ಯಾಂನಿಂದ 56,500 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಆದರೆ ಮಳೆ ಹೆಚ್ಚಳವಾದ ಹಿನ್ನೆಲೆ ಹೊರ ಹರಿವು ಪ್ರಮಾಣ ಏರಿಕೆಯಾಗಲಿದೆ.
ರಾತ್ರಿ 12 ಗಂಟೆಗೆ 61,500 ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊಳೆಗೆ ಬಿಡಲು ತೀರ್ಮಾನಿಸಲಾಗಿದೆ. ಇವತ್ತು ಬೆಳಗ್ಗೆಯಿಂದ 41 ಸಾವಿರ ಕ್ಯೂಸೆಕ್ ಹೊರಹರಿವು ಇತ್ತು. ಮಳೆ ಹೆಚ್ಚಾದ ಹಿನ್ನೆಲೆ ಸಂಜೆಯಿಂದ ಹೊರಹರಿವು ಪ್ರಮಾಣ 50 ಸಾವಿರ ಕ್ಯೂಸೆಕ್‍ಗೆ ಹೆಚ್ಚಳವಾಯಿತು.
ಭಾರಿ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡುತ್ತಿರುವುದರಿಂದ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮುಳುಗಡೆಯಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು
















