ಗಾಜನೂರು ತುಂಗಾ ಜಲಾಶಯದ ಐದು ಗೇಟುಗಳು ಓಪನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | DAM | 19 ಮೇ 2022

ತುಂಗಾ ಜಲಾಶಯದ ಐದು ಗೇಟುಗಳನ್ನು ಮೇಲೆತ್ತಲಾಗಿದೆ. ಭಾರಿ ಮಳೆ ಮತ್ತು ಈಗಾಗಲೇ ಜಲಾಶಯ ಭರ್ತಿಯಾಗಿದ್ದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ.

ಗಾಜನೂರಿನ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದ ಗರಿಷ್ಠ ಮಟ್ಟ 588.24 ಮಿಮೀ. ಈಗಾಗಲೆ ಅಷ್ಟೆ ಪ್ರಮಾಣದ ನೀರಿನ ಸಂಗ್ರಹವಿತ್ತು. ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗಿದ್ದರಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿತ್ತು.

ಇವತ್ತು ಜಲಾಶಯದ ಐದು ಕ್ರಸ್ಟ್ ಗೇಟುಗಳನ್ನು ಮೇಲೆತ್ತಿ, ಹೊಳೆಗೆ ನೀರು ಹರಿಸಲಾಯಿತು. ಸದ್ಯ ಐದು ಸಾವಿರ ಕ್ಯೂಸೆಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

Shimoga Nanjappa Hospital

ಇನ್ನು, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಉಪ ವಿಭಾಗಾಧಿಕಾರಿ ಪ್ರಕಾಶ್ ಸೇರಿದಂತೆ ಹಲವು ಅಧಿಕಾರಿಗಳು ಜಲಾಶಯಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

ಇದನ್ನೂ ಓದಿ – ಭಾರಿ ಮಳೆ, ಶಿವಮೊಗ್ಗ ಜಿಲ್ಲೆಯಲ್ಲಿ ಕಂಟ್ರೋಲ್ ರೂಂ ಸ್ಥಾಪನೆ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment