ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 JANUARY 2023
SHIMOGA : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೋರಿ ಬೆದರಿಸುವ (hori habba) ಸ್ಪರ್ಧೆ ವೇಳೆ ಗಾಯಗೊಂಡು ಇಬ್ಬರು ಸಾವನ್ನಪ್ಪಿದ್ದಾರೆ.
ಘಟನೆ 1 : ಶಿಕಾರಿಪುರ
ಜ.14ರಂದು ಶಿಕಾರಿಪುರ ತಾಲೂಕಿನ ಮಳ್ಳೂರು ಗ್ರಾಮದಲ್ಲಿ ಹೋರಿ ಬೆದರಿಸುವ (hori habba) ಸ್ಪರ್ಧೆ ಆಯೋಜಿಸಲಾಗಿತ್ತು. ರಂಗನಾಥ್ (24) ಎಂಬುವವರಿಗೆ ಗಂಭೀರ ಗಾಯವಾಗಿತ್ತು. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ರಂಗನಾಥ್ ಮೃತಪಟ್ಟಿದ್ದಾರೆ.
ಘಟನೆ 2 : ಶಿವಮೊಗ್ಗ
ಶಿವಮೊಗ್ಗ ತಾಲೂಕಿನ ಕೊನಗವಳ್ಳಿಯಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಿಸಲು ತೆರಳಿದ್ದ ಲೋಕೇಶ್ (32) ಎಂಬುವವರು ಮೃತಪಟ್ಟಿದ್ದಾರೆ. ಲೋಕೇಶ್ ಅವರ ಎದೆಗೆ ಹೋರಿ ತಿವಿದು, ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಲೋಕೇಶ್ ಮೃತಪಟ್ಟಿದ್ದಾರೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗದ ಆಲ್ಕೊಳ ನಿವಾಸಿಯಾಗಿದ್ದು, ಕುಟುಂಬ ಆರ್ಥಿಕ ಸಂಷ್ಟದಲ್ಲಿದೆ. ಆದ್ದರಿಂದ ಲೋಕೇಶ್ ಅವರ ಕುಟುಂಬ ನಿರ್ವಹಣೆಗಾಗಿ ಅವರ ಪತ್ನಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಆಗ್ರಹಿಸಿ ಕುಟುಂಬದವರು ಆಗ್ರಹಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೀದಿಗಿಳಿದ ಉದ್ಯಮಿಗಳು, ಕಾರ್ಮಿಕರು, ಡಿಸಿ ಕಚೇರಿ ಮುಂದೆ ಭೂಪಾಳಂ ಕುಟುಂಬದ ಕಣ್ಣೀರು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422