ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಮೀನಿನಲ್ಲಿ ಹಾದು ಹೋಗಿರುವ ಹೈಟೆನ್ಷನ್ ವಯರ್ (Wire) ತಗುಲಿ ವಿದ್ಯುತ್ ಸ್ಪರ್ಶಿಸಿ ತಾಯಿ ಮತ್ತು ಮಗ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಆಯನೂರು ಕೋಟೆ ವಾಸಿ ತಸ್ಮಿಯಾ ಮತ್ತು ಮಗ ಮೊಹಮ್ಮದ್ ಅನಿಸ್ ಉಲ್ಲಾ ಗಾಯಗೊಂಡಿದ್ದಾರೆ. ನಾಗರಬಾವಿ ಗ್ರಾಮದಲ್ಲಿ ತಮ್ಮ ಜಮೀನಿನಲ್ಲಿ ನಡೆದು ಹೋಗುವಾಗ ಘಟನೆ ಸಂಭವಿಸಿದೆ. ಜಮೀನಿನ ಮಧ್ಯದಲ್ಲಿ ಹಾದು ಹೋಗಿರುವ ಹೈಟೆನ್ಷನ್ ವಯರ್ ನೆಲಕ್ಕೆ ತಾಗುವಂತಿದ್ದು, ಮೊಹಮ್ಮದ್ ಅನಿಸ್ ಉಲ್ಲಾ ಅವರಿಗೆ ತಗುಲಿ ಶಾಕ್ ಹೊಡೆದಿದೆ. ಅವರನ್ನು ರಕ್ಷಿಸಲು ತಾಯಿ ತಸ್ಮಿಯಾ ಹೋಗಿದ್ದು ಅವರಿಗು ವಿದ್ಯುತ್ ಸ್ಪರ್ಶಿಸಿದೆ ಎಂದು ಆರೋಪಿಸಲಾಗಿದೆ.
ಸ್ಥಳೀಯರು ಕೂಡಲೆ ತಾಯಿ ಮತ್ತು ಮಗನನ್ನು ರಕ್ಷಿಸಿದ್ದಾರೆ. ತಸ್ಮಿಯಾ ಅವರು ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಪುತ್ರ ಮೊಹಮ್ಮದ್ ಅನಿಸ್ ಉಲ್ಲಾ ಗಂಭೀರ ಗಾಯಗೊಂಡಿದ್ದು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಗೋಪಿ ಸರ್ಕಲ್‌ನಿಂದ ರಸ್ತೆ ಉದ್ದಕ್ಕೂ ವಾಹನಗಳಿಗೆ ಡಿಕ್ಕಿ ಹೊಡೆಯುತ್ತ ಸಾಗಿದ ಕಾರು, ಏನಿದು ಕೇಸ್?

two injured after hightension electric Wire touch
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















