ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | 30 JANUARY 2023
AYANUR | ಖಾಸಗಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು (two youths) ಸಾವನ್ನಪ್ಪಿದ್ದಾರೆ. ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ಸಂಭವಿಸಿದೆ.

ಶಿವಮೊಗ್ಗದ ಪುರಲೆ ನಿವಾಸಿ ಅನಿಲ್ ಮತ್ತು ಊರುಗಡೂರು ಇಂದಿರಾ ನಗರದ ರಂಜಿತ್ ಮೃತರು. ಇಬ್ಬರು ಯುವಕರು ಹೊಸನಗರದಿಂದ ಶಿವಮೊಗ್ಗಕ್ಕೆ ಬೈಕಿನಲ್ಲಿ ಹಿಂತಿರುಗುತ್ತಿದ್ದರು. ಖಾಸಗಿ ಬಸ್ ಶಿಕಾರಿಪುರಕ್ಕೆ ತೆರಳುತ್ತಿತ್ತು. ಬಸ್ ಮತ್ತು ಬೈಕ್ ಡಿಕ್ಕಿಯಾಗಿದ್ದು ಅನಿಲ್ ಮತ್ತು ರಂಜಿತ್ ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ – ತುಮಕೂರು ಹೆದ್ದಾರಿ ಕಾಮಗಾರಿಯ ಗುಂಡಿಯಲ್ಲಿ ಮೃತದೇಹ, ಕಾರೇಹಳ್ಳಿಯಲ್ಲಿ ಟೈರ್ ಗೆ ಬೆಂಕಿ, ಆಕ್ರೋಶ
ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


CLICK HERE TO JOIN SHIVAMOGGA LIVE WHATSAPP GROUP




