BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು (veterinarian) ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ದೈವಿ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

Lion-Tiger-Safari-Tyavrekoppa-in-Shimoga.

ಡಾ. ಸಮೀಕ್ಷಾ ಅವರು ಸಫಾರಿಯಲ್ಲಿ ಪಶುವೈದ್ಯ ಅಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ 10:30ರ ಸುಮಾರಿಗೆ ಅವರು ಸನ್ ಕಾನರ್ ಹಕ್ಕಿಯ ಚಿಕಿತ್ಸೆಗಾಗಿ ಮೃಗಾಲಯದ ಆಸ್ಪತ್ರೆಗೆ ತೆರಳಿದ್ದರು. ಬಳಿಕ ರಾತ್ರಿ 11:45ರ ಸುಮಾರಿಗೆ ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಅದರ ಆವರಣದ ಒಳಗೆ ಹೋದಾಗ, ನೀರಾನೆ ಹಠಾತ್ತಾಗಿ ಅವರ ಮೇಲೆ ದಾಳಿ ಮಾಡಿದೆ.

Lion-Tiger-Safari-Tyavrekoppa-in-Shimoga.

ಇದನ್ನೂ ಓದಿ – ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಶಿವಮೊಗ್ಗದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 6:30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಶಿವಮೊಗ್ಗ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sunrise Facility Services, Sri sai Trust Shimoga
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment